ಕಾರ್ಕಳ ಮಹಾಮಸ್ತಕಾಭಿಷೇಕ 2027: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು

ಕಾರ್ಕಳ ಮಹಾಮಸ್ತಕಾಭಿಷೇಕ 2027: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು

ಕಾರ್ಕಳ: ಕಾರ್ಕಳದಲ್ಲಿ 2027 ಫೆಬ್ರವರಿಯಲ್ಲಿ ನಡೆಯಲಿರುವ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಸಂಬಂಧಿಸಿದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.

ಉಡುಪಿ ಜಿಲ್ಲಾಧಿಕಾರಿಗಳು ಕಾರ್ಕಳದಲ್ಲಿ ಜೈನ ಮಂದಿರಗಳ ಸ್ಥಳ ಪರಿಶೀಲನೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಪ್ರಸ್ತಾವನೆಗೆ ಸರ್ಕಾರ ಮಂಜೂರಾತಿ ನೀಡಿದೆ. 2026-27ನೇ ಸಾಲಿನ ಆಯವ್ಯಯದಲ್ಲಿ ಜೈನ, ಬೌದ್ಧ ಮತ್ತು ಸಿಖ್ ಸಮುದಾಯ ಅಭಿವೃದ್ಧಿ ಯೋಜನೆಯಡಿ ಅನುದಾನ ಒದಗಿಸಲಾಗುತ್ತದೆ.

ಈ ಅನುದಾನದ ಮೂಲಕ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ ನಿರ್ಮಾಣ, ಕಾರ್ಕಳ ಗ್ರಾಮೀಣ ಪ್ರದೇಶದಲ್ಲಿರುವ ಕಾರ್ಕಳ ತಾಲೂಕಿನ ಅಜೆಕಾರು, ರೆಂಜಾಳ, ಮುಂಡ್ಲಿ, ಶಿರ್ಲಾಲು ಸೂಡಿ ಮತ್ತು ನಲ್ಲೂರು ಕೂಷ್ಮಾಂಡಿನಿ ಬಸದಿಗಳ ಸಂಪರ್ಕ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ. ಜೊತೆಗೆ ಕಾರ್ಕಳ ಜೈನ ಮಠದ ತ್ಯಾಗಿ ಭವನ, ಮಾತಾಜಿ ಭವನ ಹಾಗೂ ಸಭಾಂಗಣ ನವೀಕರಣ, ಗೊಮ್ಮಟೇಶ್ವರ ಬೆಟ್ಟಕ್ಕೆ ನೀರಿನ ಸರಬರಾಜು ಮತ್ತು ಕೊಳವೆಬಾವಿ ನಿರ್ಮಾಣ ಕೈಗೊಳ್ಳಲು ಉದ್ದೇಶಿಸಲಾಗಿದೆ.

ಈ ಯೋಜನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ, ಒಟ್ಟು ಅನುದಾನದ ಶೇ.75 ರಷ್ಟು ಮೊತ್ತವನ್ನು ಮೊದಲ ಕಂತಾಗಿ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article