ಪಿಕಪ್ ವಾಹನಕ್ಕೆ ಬೈಕ್ ಢಿಕ್ಕಿ: ಯುವಕ ಸಾವು

ಪಿಕಪ್ ವಾಹನಕ್ಕೆ ಬೈಕ್ ಢಿಕ್ಕಿ: ಯುವಕ ಸಾವು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲುಗಡೆಗೊಳಿಸಿದ್ದ ಪಿಕಪ್ ವ್ಯಾನ್ ನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಬಂದ್ಯೋಡು ಸಮೀಪ ನಡೆದಿದೆ.

ತಲಪಾಡಿ ಕೆ.ಸಿ.ರೋಡ್ ನಿವಾಸಿ ಮುಹಿಯುದ್ದೀನ್ ಸಿನಾನ್ (28) ಮೃತಪಟ್ಟವರು.

ಸಿನಾನ್ ಬೈಕಿನಲ್ಲಿ ಉಪ್ಪಳ ಕಡೆಯಿಂದ ಕುಂಬಳೆಯತ್ತ ಬರುತ್ತಿದ್ದ ವೇಳೆ ಬಂದ್ಯೋಡು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್‌ಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಸಿನಾನ್ ರನ್ನು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article