ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ನಿಧನ

ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ನಿಧನ


ಕುಂದಾಪುರ: ಜನಸ್ನೇಹಿ ಪೊಲೀಸ್ ಉಪನಿರೀಕ್ಷಕರಾಗಿ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು,  ಪ್ರಸ್ತುತ ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್‌ಐ ನಾಸೀರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟಿದ್ದಾರೆ. 

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಅವರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡರು ಎನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಭಾರತೀಯ ಸೇನೆಯಲ್ಲಿ ಕರ್ತವ್ಯನಿರ್ವಹಿಸಿ ನಿವೃತ್ತಿ ಪಡೆದು ಪೊಲೀಸ್ ಇಲಾಖೆ ಸೇರಿದ ನಾಸೀರ್ 2010 ಬ್ಯಾಚ್‌ನ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ಆಗಿ ನಿಯೋಜನೆಗೊಂಡಿದ್ದರು. ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕೊಲ್ಲೂರು, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಸೆನ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು. ಕೆಲ ತಿಂಗಳ ಹಿಂದೆ ಕುಂದಾಪುರ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದರು.

ಜನಸ್ನೇಹಿ ಅಧಿಕಾರಿ: 

ತಾನು ಕರ್ತವ್ಯ ನಿರ್ವಹಿಸುವ ಠಾಣೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು ಅಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ ಠಾಣೆಯ ಬಲವರ್ಧನೆ ಮಾಡುತ್ತಿದ್ದುದು ಮಾತ್ರವಲ್ಲದೆ ಸಾರ್ವಜನಿಕರೊಂದಿಗೆ ಸ್ನೇಹಮಯವಾಗಿ ಗುರುತಿಸಿಕೊಂಡು ಜನಸ್ನೇಹಿ ಪೊಲೀಸ್ ಎಂದು ಕರೆಸಿಕೊಂಡಿದ್ದರು. ಅವರ ಈ ಹಠಾತ್ ನಿರ್ಗಮನ ಸಹೋದ್ಯೋಗಿಗಳು, ಅಭಿಮಾನಿಗಳಲ್ಲಿ ದಿಗ್ ಭ್ರಮೆ ಮೂಡಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article