ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ: ಸಚಿವೆ ಹೆಬ್ಬಾಳ್ಕರ್
ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಹೆಲಿಪ್ಯಾಡ್ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು ವಾರಾಹಿ ಯೋಜನೆಯ ಪ್ರಗತಿ ಬಗ್ಗೆ ತಿಳಿಸಿದರು.
ಬೈಂದೂರು ನೂತನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಒಂದಷ್ಟು ಸರ್ಕಾರಿ ಬಸ್‌ಗಳು ಪ್ರವೇಶಿಸುವುದಿಲ್ಲ ಎಂಬ ವಿಷಯವನ್ನು ಮಾಧ್ಯಮದವರು ಅವರ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಸಚಿವರು, ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಶೀಘ್ರವೇ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಉಪಚುನಾವಣೆಯಲ್ಲಿನ ಗೆಲುವಿನ ಬಗ್ಗೆ ಪತ್ರಕರ್ತರು ಕೇಳಿದಾಗ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಆತ್ಮವಿಶ್ವಾಸದಿಂದವಹೇಳಿದರು. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲ್ಲುತ್ತಾರೆ. ಸಾಮಾನ್ಯವಾಗಿ ಉಪಚುನಾವನೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವು ಇರುತ್ತದೆ. ಜೊತೆಗೆ ಗ್ಯಾರೆಂಟಿ ಯೋಜನೆಯಿಂದ ಮಹಿಳೆಯರು ಸಂತುಷ್ಟರಾಗಿದ್ದಾರೆ. ಇವರೆಲ್ಲರ ಮಾತಾವೂ ಕಾಂಗ್ರೆಸ್ ಗೇ ಸಿಗುತ್ತದೆ ಎಂದರು.
ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ, ಪಕ್ಷದ ಹಿರಿ ಕಿರಿಯ ಮುಖಂಡರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಕುಂದಾಪುರ ಉಪವಿಭಾಗಾಧಿಕಾರಿಣಿ ರಶ್ಮಿ ಎಸ್.ಆರ್, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಕುಂದಾಪುರ ಇನ್ಸ್‌ಪೆಕ್ಟರ್ ಜಯರಾಮ್ ಗೌಡ, ಯುವ ಮೆರಿಡಿಯನ್ ಆಡಳಿತ ಪಾಲುದಾರ ಬಿ. ಉದಯ್ ಕುಮಾರ್ ಶೆಟ್ಟಿ ಇದ್ದರು.