ಏ.4 ರಂದು 3ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಗುರುಪುರ ಕಂಬಳ: ಇನಾಯತ್ ಅಲಿ

ಏ.4 ರಂದು 3ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಗುರುಪುರ ಕಂಬಳ: ಇನಾಯತ್ ಅಲಿ


ಮಂಗಳೂರು: ಮೂಳೂರು-ಅಡ್ಡೂರು ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಮೂರನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕೆರೆ ಗುರುಪುರ ಕಂಬಳ ಏಪ್ರಿಲ್ 4 ರಂದು ಗುರುಪುರದ ಮಾಣಿಬೆಟ್ಟುಗುತ್ತುವಿನಲ್ಲಿ ನಡೆಯಲಿದೆ ಎಂದು ಮೂಳೂರು-ಟಡ್ಡೂರು ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ಹೇಳಿದರು.

ಅವರು ಇಂದು ನಗರದ ಖಾಸಗಿ ಹೋಟೆಲ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಶನಿವಾರ ಬೆಳಗ್ಗೆ 8.30ಕ್ಕೆ ಬಂಟರ ಯನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಲಿದ್ದು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಮೂಳೂರು-ಅಡ್ಡೂರು ಜೋಡುಕೆರೆ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ವಹಿಸಲಿದ್ದಾರೆ ಎಂದರು.

ಗೌರವ ಉಪಸ್ಥಿತಿಯಲ್ಲಿ ಮೂಳೂರು ಮಂಡಿತ್ತಾಯ ದೈವಸ್ಥಾನದ ತಂತ್ರಿ ಜಿ.ಟಿ. ವಾಸುದೇವ ಭಟ್, ಜಿಲ್ಲಾ ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಗುಣಪಾಲ ಕಡಂಬ, ಬೊಳ್ಮಾರಗುತ್ತು ಶಶಿಧರ್ ಭಟ್, ಗೋಳಿದಡಿಗುತ್ತು ಗಡಿಕಾರ ವರ್ಧಮಾನ್ ಶೆಟ್ಟಿ, ಕೊಡೆತ್ತೂರುಗುತ್ತು ಗುತ್ತಿನವರಾದ ನಿತಿನ್ ಶೆಟ್ಟಿ, ಬೆಳ್ಳೂರಿನ ಶ್ರೀ ಕಾವೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರಾದ ರಘು ಶೆಟ್ಟಿ ಭಾಗವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಅನೇಕ ಗಣ್ಯರು ಉಪಸ್ಥಿತರಿರಲಿದ್ದಾರೆ.

ಸಂಜೆ 6.30ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಬಮುಲ್‌ನ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಉದ್ಘಾಟಿಸಲಿದ್ದಾರೆ. ಘನ ಉಪಸ್ಥಿತಿಯಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇರುವರು. ಅಧ್ಯಕ್ಷತೆಯನ್ನು ಮೂಳೂರು-ಅಡ್ಡೂರು ಜೋಡುಕೆರೆ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ವಹಿಸಲಿದ್ದಾರೆ ಎಂದರು.

ಗೌರವ ಉಪಸ್ಥಿತಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್‌ಸಿ ಮಂಜುನಾಥ ಭಂಡಾರಿ, ಮಾಜಿ ಸಚಿವರುಗಳಾದ ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಎಂಎಲ್‌ಸಿ ಐವನ್ ಡಿಸೋಜಾ, ಶಾಸಕ ಅಶೋಕ್ ಕುಮಾರ್ ರೈ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಶ್ರೀ ಕ್ಷೇತ್ರ ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಮಾಜಿ ಶಾಸಕರುಗಳಾದ ಜೆ.ಆರ್. ಲೋಬೊ, ಶಕುಂತಳಾ ಟಿ. ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ರಕ್ಷಿತ್ ಶಿವರಾಂ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರಮರ್ತಕರಾದ ನಾಡೋಜ ಡಾ. ಜಿ. ಶಂಕರ್ ಮತ್ತಿತರರು ಉಪಸ್ಥಿತರಿರುವರು ಎಂದು ತಿಳಿಸಿದರು.

ತುಳುನಾಡಿನ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಕಂಬಳ ನಡೆಯುವ ಸಂದರ್ಭದಲ್ಲಿ ಯಕ್ಷಗಾನ, ಕಂಬಳ ಸಾಧಕರಿಗೆ ಸನ್ಮಾನ, ಫುಡ್ ಫೆಸ್ಟಿವಲ್, ಕನೆ ಹಲಗೆ ವಿಭಾಗದಲ್ಲಿ ನೀರು ಹಾಯಿಸಿದ ಎಲ್ಲಾ ಕೋಣಗಳಿಗೆ 1 ಗ್ರಾಂ ಚಿನ್ನದ ಪದಕ, ಭಾಗವಹಿಸಿದ ಎಲ್ಲಾ ವಿಭಾಗದ ಕೋಣಗಳ ಮಾಲಕರಿಗೆ ಬೆಳ್ಳಿಯ ನಾಣ್ಯ ಹಾಗೂ ಎಲ್ಲಾ ಕೋಣಗಳಿಗೆ 30 ಕೆ.ಜಿ. ಹುರುಳಿ ನೀಡಲಾಗುವುದು, ಇದರೊಂದಿಗೆ ಎರಡು ದಿನ ಮಧ್ಯಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಬಿ.ಎಂ. ಪದ್ಮನಾಥ ಕೋಟ್ಯಾನ್, ಗುಣಪಾಲ್ ಕಡಂಬ, ಲೋಕೇಶ್ ಶೆಟ್ಟಿ ಮುಚ್ಚೂರು, ಪುರುಷೋತ್ತಮ ಚಿತ್ರಾಪುರ, ಆರ್.ಕೆ. ಪೃಥ್ವಿರಾಜ್, ಯಶವಂತ್ ಶೆಟ್ಟಿ, ಪದ್ಮನಾಭ ಶೆಟ್ಟಿ, ಉಮೇಶ್ ಶೆಟ್ಟಿ, ಹರೀಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article