ಚಿನ್ನ ಪಾಲೀಶ್ ಮಾಡುವುದಾಗಿ ವಂಚಿಸಿದ ಆರೋಪಿಯ ಬಂಧನ

ಚಿನ್ನ ಪಾಲೀಶ್ ಮಾಡುವುದಾಗಿ ವಂಚಿಸಿದ ಆರೋಪಿಯ ಬಂಧನ


ಮಂಗಳೂರು: ಚಿನ್ನವನ್ನು ಪಾಲೀಸ್ ಮಾಡುವುದಾಗಿ ವಂಚನೆ ಮಾಡಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಿಹಾರ ಸುಫೋಲ್ ಜಿಲ್ಲೆಯ ನಿವಾಸಿ ಚಂದನ್ ಕುಮಾರ್ (30) ಎಂದು ಗುರುತಿಸಲಾಗಿದೆ.

ಪ್ರಕರಣದ ವಿವಾರ:

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಎಂಬಲ್ಲಿ ಫೆ.10 ರಂದು ಯಾರೋ ಅಪರಿಚಿತ ಆರೋಪಿತನು ಸೇಲ್ಸ್ ಮ್ಯಾನ್ ರೂಪದಲ್ಲಿ, ಚಿನ್ನದ ಒಡವೆಗಳನ್ನು ತೊಳೆದು ಪಾಲಿಸ್ ಮಾಡಿಕೊಡುವುದಾಗಿ ನಂಬಿಸಿ, ಚಿನ್ನವನ್ನು ಪಡೆದುಕೊಂಡು ಅದನ್ನು ಯಾವುದೋ ದ್ರಾವಣ ಬಳಸಿ ಕರಗಿಸಿ ವಂಚಿಸಿದ ಘಟನೆಗೆ ಸಂಬಂದಿಸಿ ಪ್ರಕರಣ ದಾಖಲಾಗಿರುತ್ತದೆ. 

ಪ್ರಕರಣದ ತನಿಖೆ ನಡೆಸಿದ ವೇಣೂರು ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯಿಂದ ಸುಮಾರು 75,000 ರೂ. ಮೌಲ್ಯದ 07 ಗ್ರಾಂ ಚಿನ್ನಾಭರಣವನ್ನು ವಶಪಡಿಸಲಾಗಿದೆ.

ಪ್ರಕರಣದಲ್ಲಿ ಆರೋಪಿತರ ಪತ್ತೆಗಾಗಿ ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಅಕ್ಷಯ್ ಡವಗಿ, ಓಮನ ಎನ್. ಅವರ ನೇತೃತ್ವದಲ್ಲಿ ಎ.ಎಸ್.ಐ. ವೆಂಕಟೇಶ್ ನಾಯ್ಕ, ಎ.ಎಸ್.ಐ ಬೆನ್ನಿಚ್ಚನ್, ಹೆಚ್.ಸಿ.ಗಳಾದ ಕೃಷ್ಣ, ಕೇಶವತಿ, ಪಿ.ಸಿ.ಗಳಾದ ಬಸವರಾಜ್, ಮೋಹನ್, ರಾಕೇಶ್ ಅವರ ತಂಡ ಕಾರ್ಯಾಚರಣೆ ನಡೆಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article