ಲೋಕೋಪಯೋಗಿ ಇಲಾಖೆ ಎಸ್‌ಡಿಎ ಲೋಕಾಯುಕ್ತ ಬಲೆಗೆ

ಲೋಕೋಪಯೋಗಿ ಇಲಾಖೆ ಎಸ್‌ಡಿಎ ಲೋಕಾಯುಕ್ತ ಬಲೆಗೆ


ಮಂಗಳೂರು: ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ಮಂಗಳೂರು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ವಿದ್ಯುತ್ ಉಪವಿಭಾಗದ ಎಸ್.ಡಿ.ಎ ಸಿಬ್ಬಂದಿ ಸಂಪತ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದ ದೂರುದಾರ ಗುತ್ತಿಗೆದಾರರು 2025 ರ ಸಾಲಿನಲ್ಲಿ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದರು. ಈ ಕೆಲಸದ ಬಿಲ್‌ಗೆ ಎಸ್.ಡಿ.ಎ ಸಿಬ್ಬಂದಿ ಸಂಪತ್ ಅವರು 4 ಪರ್ಸೆಂಟ್‌ನಂತೆ ಒಟ್ಟು 22,600 ರೂ. ಲಂಚದ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸಂಪತ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೋಮವಾರ ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. 

ಸದರಿಯವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಈ ಕಾರ್ಯಾಚರಣೆಯನ್ನು ಲೋಕಯುಕ್ತ ಪೊಲೀಸ್ ಅಧೀಕ್ಷಕ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಸುರೇಶ್ ಕುಮಾರ್ ಪಿ., ಡಾ. ಗಾನ ಪಿ. ಕುಮಾರ್, ಪಿ.ಐ. ಭಾರತಿ ಜಿ. ಅವರ ಉಸ್ತುವಾರಿಯಲ್ಲಿ ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಕೆ.ಎನ್. ಅವರು ಸಿಬ್ಬಂದಿಗಳಾದ ರಾಜಪ್ಪ, ಮಹೇಶ್, ಆದರ್ಶ್, ರಾಮ ನಾಯ್ಕ, ಗಂಗಣ್ಣ, ಮಹಾದೇವ, ಪವಿತ್ರ, ಲಕ್ಷ್ಮೀ, ರವಿ ಪವಾರ್, ನವೀನ್ ರವರ ಜೊತೆ ನಡೆಸಿರುತ್ತಾರೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article