ಮಂಗಳೂರು ವಿವಿ ಪದವಿ ಪರೀಕ್ಷೆಗಳಲ್ಲಿ ರಥಬೀದಿ ಪದವಿ ಕಾಲೇಜಿಗೆ ಎರಡು ರ‍್ಯಾಂಕ್
Wednesday, March 4, 2026
ಮಂಗಳೂರು: 2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ ಪರೀಕ್ಷೆಗಳಲ್ಲಿ ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಎರಡು ರ‍್ಯಾಂಕ್‌ಗಳನ್ನು ಗಳಿರುತ್ತಾರೆ. ಪ್ರಿಯಾ ಕೆ., ಬಿ.ಎಸ್.ಡಬ್ಲೂ ಪದವಿಯಲ್ಲಿ ದ್ವಿತೀಯ ರ‍್ಯಾಂಕ್ ಮತ್ತು ಪ್ರಗತಿ ಬಿ.ಎಸ್ಸಿ ಪದವಿಯಲ್ಲಿ ಏಳನೇ ರ‍್ಯಾಂಕ್ ಪಡೆದಿರುತ್ತಾರೆ.
ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಎಲ್ಲಾ ಬೋಧಕ/ಬೋಧಕೇತರರು, ಶಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಿ. ವೇದವ್ಯಾಸ ಕಾಮತ್ ಮತ್ತು ಎಲ್ಲಾ ಸದಸ್ಯರು, ಕಾಲೇಜು ಪೋಷಕರಾದ ಡಾ. ಪಿ. ದಯಾನಂದ ಪೈ-ಪಿ ಸತೀಶ್ ಪೈ ಸಹೋದರರು, ವಿದ್ಯಾರ್ಥಿಗಳು, ರಕ್ಷಕ-ಶಿಕ್ಷಕ ಸಂಘ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ಮತ್ತು ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.