ಸಾಮಾಜಿಕ ಜಾಲತಾಣಗಳಲ್ಲಿ ಭಯ ಬಿತ್ತಿಸುವ ಸಂದೇಶ,ಕಠಿಣ ಕ್ರಮಕ್ಕೆ ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ

ಸಾಮಾಜಿಕ ಜಾಲತಾಣಗಳಲ್ಲಿ ಭಯ ಬಿತ್ತಿಸುವ ಸಂದೇಶ,ಕಠಿಣ ಕ್ರಮಕ್ಕೆ ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ


ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಿಡಿಕೇಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪೊಲೀಸ್ ಕಮಿಷನರ್ ಜೊತೆ ಮಾತುಕತೆ ನಡೆಸಿರುವ ಸಭಾಧ್ಯಕ್ಷ ಯು.ಟಿ.ಖಾದರ್, ಉಳ್ಳಾದಲ್ಲಿ ಸರ್ವ ಧರ್ಮೀಯರು ಸೌಹಾರ್ದಯುತ ಸಹಬಾಳ್ವೆ ನಡೆಸುತ್ತಿದ್ದು ಈ ರೀತಿಯ ಬೆದರಿಕೆ ಪೋಸ್ಟ್ ಗಳ ಮೂಲಕ ಕೋಮುಸೌಹಾರ್ದವನ್ನು ಕದಡುವ ಹುನ್ನಾರದ ಬಗ್ಗೆ  ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article