ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಯೋಗ: ಗೋಪಾಲಕೃಷ್ಣ ದೇಲಂಪಾಡಿ

ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಯೋಗ: ಗೋಪಾಲಕೃಷ್ಣ ದೇಲಂಪಾಡಿ


ಮಂಗಳೂರು: ನಿಯಮಿತ ಯೋಗಾಭ್ಯಾಸವು ದೀರ್ಘಕಾಲದ ಒತ್ತಡವನ್ನು ಕಡಿಮೆ ಮಾಡುವ ಮೂಲಕ, ಉರಿಯೂತವನ್ನು ಕಡಿಮೆ ಮಾಡುವ ಮೂಲಕ, ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಮೂಲಕ ಮತ್ತು ಆರೋಗ್ಯಕರ ತೂಕ ನಿರ್ವಹಣೆಗೆ ಸಹಾಯ ಮಾಡುವ ಮೂಲಕ ರೋಗವನ್ನು ತಡೆಗಟ್ಟಲು ಸಹಾಯ ಮಾಡುತ್ತದೆ ಎಂದು ಯೋಗ ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಹೇಳಿದರು.


ಅವರು ಮಾ.27 ರಂದು ನಗರದ ಮಂಗಳಾದೇವಿ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಮಠದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರ ಮಾರ್ಗದರ್ಶನದಲ್ಲಿ ನಡೆದ ಮಾರ್ಚ್ ತಿಂಗಳ ಎರಡು ವಾರಗಳ ಕಾಲ ಜರುಗಿದ ಯೋಗ ಶಿಬಿರದ ಸಮರೋಪದಲ್ಲಿ ಮಾತನಾಡಿದರು.


ಆಸನಗಳು, ಉಸಿರಾಟದ ತಂತ್ರಗಳು (ಪ್ರಾಣಾಯಾಮ) ಮತ್ತು ಧ್ಯಾನವನ್ನು ಸೇರಿಸುವುದರಿಂದ ರೋಗನಿರೋಧಕ ಕಾರ್ಯವನ್ನು ಹೆಚ್ಚಿಸುತ್ತದೆ. ಯೋಗವು ಕೇವಲ ಒಂದು ವ್ಯಾಯಾಮವಲ್ಲ, ಅದು ದೇಹ, ಮನಸ್ಸು ಮತ್ತು ಆತ್ಮವನ್ನು ಸಮತೋಲನದಲ್ಲಿಡುವ ಒಂದು ಸಮಗ್ರ ಜೀವನ ಪದ್ಧತಿಯಾಗಿದೆ ಎಂದು ತಿಳಿಸಿದರು.


ದೇಲಂಪಾಡಿ ಶಿಷ್ಯರಾದ ಸುಮಾ ಹಾಗೂ ಚಂದ್ರಹಾಸ ಬಾಳ ಇವರು ಸಹಕರಿಸಿದರು. ಯೋಗ ತರಬೇತಿ ನೀಡಿದ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರನ್ನು  ಶಿಬಿರಾರ್ಥಿಗಳು ಗೌರವಿಸಿದರು.





Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article