ದೇವಸ್ಥಾನದ ಹುಂಡಿ ಕಳವು: ಬಂಧನ

ದೇವಸ್ಥಾನದ ಹುಂಡಿ ಕಳವು: ಬಂಧನ


ಮಂಗಳೂರು: ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿಯ ಹಣ ಕಳವು ಮಾಡಿದ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂದು ಗುರುತಿಸಲಾಗಿದೆ.

ಮಾ.3 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲನ್ನು ಮುರಿದು ದೇವಸ್ಥಾನಕ್ಕೆ ಒಳನುಗ್ಗಿ, 3 ಕಾಣಿಕೆ ಹುಂಡಿಗಳಲ್ಲಿದ್ದ ಸುಮಾರು 25,000 ರೂ. ಹಣ ಕಳ್ಳತನವಾಗಿರುವ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

ಈ ಹಿನ್ನೆಲೆಯಲ್ಲಿ ಆರೋಪಿಯ ಪತ್ತೆಗೆ ತಂಡವನ್ನು ರಚಿಸಲಾಗಿದ್ದು, ಆರೋಪಿಯ ಖಚಿತ ಮಾಹಿತಿಯ ಮೇರೆಗೆ ಬಜಪೆ ಪೊಲೀಸರು ಮಾ.31 ರಂದು ಬಂಧಿಸಿದ್ದು, ಬಂಧಿತನನ್ನು ವಿಚಾರಣೆಗೆ ಒಳಪಡಿಸಿದಾಗ, ಆತನು ಕೆಂಜಾರು ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಕಳವಾಗಿದ್ದ ಕಾಣಿಕೆ ಹುಂಡಿಯನ್ನು ವಶಕ್ಕೆ ಪಡೆಯಲಾಗಿದೆ.

ಈತನ ಮೇಲೆ ಈ ಹೆಂದೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಹಾಗೂ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ

ಆರೋಪಿತನು ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕಳ್ಳತನ ಮಾಡಿ, ಮತ್ತೆ ತಮಿಳುನಾಡಿಗೆ ತೆರಳಿ ತಪ್ಪಿಸಿಕೊಳ್ಳುವ ಪ್ರವೃತ್ತಿ ಹೊಂದಿದವನಾಗಿದ್ದು, ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಮತ್ತು ಠಾಣಾ ಕ್ರೈಂ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಅವರು ಆರೋಪಿತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article