ಸಾಲದ ಹೊರೆ ಹೆಚ್ಚಿಸಿದ ಬಜೆಟ್: ನಳಿನ್ ಕುಮಾರ್ ಕಟೀಲ್

ಸಾಲದ ಹೊರೆ ಹೆಚ್ಚಿಸಿದ ಬಜೆಟ್: ನಳಿನ್ ಕುಮಾರ್ ಕಟೀಲ್

ಮಂಗಳೂರು: ಸಿದ್ದರಾಮಯ್ಯ ಅವರ ಈ ಹಿಂದಿನ ಬಜೆಟ್‌ನಂತೆ ಈ ಬಜೆಟ್ ಕೂಡಾ ಕೇವಲ ಘೋಷಣೆಗೆ ಸೀಮಿತವಾದ ಹಾಗಿದೆ. ಬಜೆಟ್ ಗಾತ್ರ ಹಿಗ್ಗಿದೆ. ಜತೆಗೆ ಸಾಲದ ಹೊರೆಯೂ ಇಮ್ಮಡಿಯಾಗಿದೆ. ಅಬಕಾರಿ ಇಲಾಖೆ ಮೂಲಕ ಸರ್ಕಾರ ಹೆಚ್ಚಿನ ರಾಜಸ್ವ ನಿರೀಕ್ಷಿಸಿರುವುದು ರಾಜ್ಯದ ಜನತೆಯ ದುರಂತ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಲದಲ್ಲಿ ಮುಳುಗಿರುವ ಈ ಸರ್ಕಾರ ಬಜೆಟ್‌ನ ಶೇ.೨೫ ರಷ್ಟು ಘೋಷಣೆಗಳನ್ನು ಕೂಡಾ ಕಾರ್ಯಗತ ಮಾಡುವುದು ಸಾಧ್ಯವಿಲ್ಲ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿರುವುದೇ ಬಜೆಟ್‌ನ ದೊಡ್ಡ ಸಾಧನೆ. ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ. ಪುತ್ತೂರು ಮೆಡಿಕಲ್ ಕಾಲೇಜ್‌ಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಪಾಲಿಗೆ ನಿರಾಶಾದಾಯಕ ಬಜೆಟ್ ಎಂದು ನಳಿನ್ ಕುಮಾರ್ ಕಟೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article