ಆಳ್ವಾಸ್‌ನಲ್ಲಿ ‘ಉಮಂಗ್ 2026’ ಅಂತರ್ ಕಾಲೇಜು ಸ್ಪರ್ಧೆ

ಆಳ್ವಾಸ್‌ನಲ್ಲಿ ‘ಉಮಂಗ್ 2026’ ಅಂತರ್ ಕಾಲೇಜು ಸ್ಪರ್ಧೆ


ಮೂಡುಬಿದಿರೆ: ಅಂತರ್ ಕಾಲೇಜು ಫೆಸ್ಟ್‌ಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ ಮುಖ್ಯ ವ್ಯವಸ್ಥಾಪಕ ಡಾ. ಪಿ. ಬಾಲಮುರಗನ್ ಹೇಳಿದರು.

ಆಳ್ವಾಸ್ ಸ್ವಾಯತ್ತ ಪದವಿ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಕುಎಂಪು ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾದ ‘ಉಮಂಗ್ 2026’ ಅಂತರ್ ಕಾಲೇಜು ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕದ ಜ್ಞಾನಕ್ಕಷ್ಟೇ ಸೀಮಿತವಾಗದೇ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಹಾಗೂ ಸಂವಹನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಇಂತಹ ಕಾರ್ಯಕ್ರಮಗಳು ನೆರವಾಗುತ್ತವೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಂದು ಭಾಷೆಯೂ ತನ್ನದೇ ಆದ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ಒಂದು ಭಾಷೆಯನ್ನು ಕಲಿಯುವುದರಿಂದ ಮತ್ತೊಂದು ಭಾಷೆ ಹಿಂದುಳಿಯುವುದಿಲ್ಲ; ಬದಲಾಗಿ ನಮ್ಮ ಜ್ಞಾನ ವಿಸ್ತಾರವಾಗುತ್ತದೆ ಎಂದು ಹೇಳಿದರು.

ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಕಾಲೇಜಿನ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ. ನಾರಾಯಣ ಶೆಟ್ಟಿ ಮಾತನಾಡಿದರು. ಸ್ಪರ್ಧೆಯಲ್ಲಿ ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜು ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದಿತು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಬ್ಯಾಂಕ್ ಆಫ್ ಬರೋಡಾ ಮೂಡುಬಿದಿರೆ ಶಾಖೆಯ ಹಿರಿಯ ವ್ಯವಸ್ಥಾಪಕ ಪ್ರಭು ಕುಮಾರ್, ವಿಭಾಗದ ಮುಖ್ಯಸ್ಥ ಡಾ. ದತ್ತಾತ್ರೇಯ ಹೆಗಡೆ, ವಿದ್ಯಾರ್ಥಿ ಸಂಯೋಜಕರಾದ ಲಿಖಿತ್ ಹಾಗೂ ದಿಶಾ ಕೋಟ್ಯಾನ್ ಉಪಸ್ಥಿತರಿದ್ದರು. ವಿನೀತ್ ವಾಸ್ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article