ಮಂಗಳೂರು ವಿವಿ ಪವರ್‌ಲಿಫ್ಟಿಂಗ್: ಆಳ್ವಾಸ್ ಸಮಗ್ರ ಚಾಂಪಿಯನ್-ಸತತ 22ನೇ ಬಾರಿ ಸಮಗ್ರ ತಂಡ ಪ್ರಶಸ್ತಿ

ಮಂಗಳೂರು ವಿವಿ ಪವರ್‌ಲಿಫ್ಟಿಂಗ್: ಆಳ್ವಾಸ್ ಸಮಗ್ರ ಚಾಂಪಿಯನ್-ಸತತ 22ನೇ ಬಾರಿ ಸಮಗ್ರ ತಂಡ ಪ್ರಶಸ್ತಿ


ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ರೋಶನಿ ಕಾಲೇಜಿನ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಸತತ 22ನೇ ಬಾರಿ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿರುತ್ತದೆ.

ಮಹಿಳಾ ವಿಭಾಗದಲ್ಲಿ 02 ಚಿನ್ನ, 03 ಬೆಳ್ಳಿ ಹಾಗೂ 03 ಕಂಚಿನ ಪದಕದೊಂದಿಗೆ ಒಟ್ಟು 36 ಅಂಕ ಸಂಪಾದಿಸಿ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ 01 ಚಿನ್ನ, 02 ಬೆಳ್ಳಿ ಹಾಗೂ 03 ಕಂಚಿನ ಪದಕದೊಂದಿಗೆ ಒಟ್ಟು 27 ಅಂಕ ಸಂಪಾದಿಸಿ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಆಳ್ವಾಸ್ ಕಾಲೇಜು ಪುರುಷರ ಮತ್ತು ಮಹಿಳೆಯರ ಎರಡೂ ವಿಭಾಗದಲ್ಲೂ ತಂಡ ಪ್ರಶಸ್ತಿಯನ್ನು ಪಡೆದು ಸತತ 22ನೇ ಬಾರಿ ಸಮಗ್ರ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article