ಮಾ.6 ರಿಂದ ಕೊಡಂಗಲ್ಲು ಉಚ್ಚಂಗಿ ಮಾರಿಯಮ್ಮ ಬ್ರಹ್ಮಕಲಶೋತ್ಸವ

ಮಾ.6 ರಿಂದ ಕೊಡಂಗಲ್ಲು ಉಚ್ಚಂಗಿ ಮಾರಿಯಮ್ಮ ಬ್ರಹ್ಮಕಲಶೋತ್ಸವ


ಮೂಡುಬಿದಿರೆ: ಕೊಡಂಗಲ್ಲು ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದಲ್ಲಿ ಮಾ.6 ಶುಕ್ರವಾರದಿಂದ ಮಾ.8 ಆದಿತ್ಯವಾರದವರೆಗೆ ಅಷ್ಟೋತ್ತರ ಶತ ಬ್ರಹ್ಮಕಲಶ ಹಾಗೂ ಶ್ರೀ ದೇವಿಯ ದರ್ಶನವು ನಡೆಯಲಿದೆ ಎಂದು  ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಸುರೇಶ್ ಕೋಟ್ಯಾನ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಈಬಗ್ಗೆ ಮಾಹಿತಿ ನೀಡಿದ ಅವರು ಮೂರು ದಿನಗಳಲ್ಲಿ ಸಾವಿರಾರು ಜನರ ಪಾಲ್ಗೊಳ್ಳುವಿಕೆಯಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದರು.

ಮಾ.6 ಶುಕ್ರವಾರ ಸಂಜೆ 4 ರಿಂದ ಮೂಡುಬಿದಿರೆ ಸ್ವರಾಜ್ಯ ಮೈದಾನದಿಂದ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ವರೆಗೆ ಸಾಗಲಿರುವ ವೈಭವದ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಚೌಟರ ಅರಮನೆಯ ಕುಲದೀಪ್ ಎಂ.ಹಾಗೂ ಉದ್ಯಮಿ ಕೆ.ಶ್ರೀಪತಿ ಭಟ್ ಅವರು ಚಾಲನೆ ನೀಡಲಿದ್ದಾರೆ.

7 ರಂದು ಬೆಳಿಗ್ಗೆಯಿಂದ ವಿವಿಧ ಹೋಮಗಳು ನಡೆಯಲಿದ್ದು ಸಂಜೆ 6 ಕ್ಕೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಎಕ್ಸಲೆಂಟ್  ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರು ಉದ್ಘಾಟಿಸಲಿದ್ದಾರೆ.7 ರಿಂದ ಎಕ್ಸಲೆಂಟ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ.

‌ಅಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ , ಮಧ್ಯಾಹ್ನ 2-30 ರಿಂದ ಯಕ್ಷ-ಗಾನ-ಹಾಸ್ಯ ವೈಭವ, ರಾತ್ರಿ 10 ರಿಂದ ಮಣಿ ಕೋಟೆಬಾಗಿಲು ನಿರ್ದೇಶನದ 'ಓಂಕಾರ' ನಾಟಕ ಪ್ರದರ್ಶನಗೊಳ್ಳಲಿದೆ.

8 ರಂದು ಬ್ರಹ್ಮಕಲಶಾಭಿಷೇಕ ನಡೆಯಲಿದ್ದು ಸಂಜೆ 6 ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ  ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ.

ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ದೇಜು,ಉಪಾಧ್ಯಕ್ಷ ಸಂತೋಷ್ ಕೆ, ಕಾರ್ಯದರ್ಶಿ ಸಂದೀಪ್,ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರಾದ ಕೊರಗಪ್ಪ,ಕಾರ್ಯದರ್ಶಿ ಸತೀಶ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಹೆಗ್ಡೆ,ಬೆಳುವಾಯಿ ಸೀತಾರಾಮ ಆಚಾರ್ಯ, ಕಾರ್ಯದರ್ಶಿ ಸತೀಶ್ ಕೋಟ್ಯಾನ್, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article