ಶುಶ್ರೂಷ ಪರೀಕ್ಷೆ: ಆಳ್ವಾಸ್ ಗೆ ಶೇ 99 ಫಲಿತಾಂಶ
Saturday, March 7, 2026
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯವು ಡಿಸೆಂಬರ್ 2025 ರಂದು ನಡೆಸಿದ ಶುಶ್ರೂಷ ಪರೀಕ್ಷೆಯಲ್ಲಿ ಆಳ್ವಾಸ್ ಶುಶ್ರೂಷ ಮಹಾವಿದ್ಯಾಲಯದ ಅಂತಿಮ ವರ್ಷದ ಬೇಸಿಕ್ ಬಿ.ಎಸ್ಸಿ ನರ್ಸಿಂಗ್‌ನ 94 ವಿದ್ಯಾರ್ಥಿಗಳ ಪೈಕಿ 63 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಮತ್ತು 30 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಕಾಲೇಜಿಗೆ ಶೇಕಡಾ 99 ಫಲಿತಾ೦ಶವನ್ನು ತಂದು ಕೊಟ್ಟಿರುತ್ತಾರೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ ಅವರು, ಟ್ರಸ್ಟಿ, ಡಾ. ವಿನಯ್ ಆಳ್ವ ಅವರು, ಪ್ರಾಂಶುಪಾಲರಾದ ಡಾ. ಬಿ.ಎ. ಯತಿಕುಮಾರ ಸ್ವಾಮಿ ಗೌಡ ಮತ್ತು ಕಾಲೇಜಿನ ಪ್ರಾಧ್ಯಾಪಕ ವರ್ಗದವರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.