ಶ್ರೀ ಮಹಾವೀರ ಕಾಲೇಜಿನಲ್ಲಿ ಮಹಾವೀರ ಜಯಂತಿ ಆಚರಣೆ
Monday, March 30, 2026
ಮೂಡಬಿದಿರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ಶ್ರೀ 1008 ಭಗವಾನ್ ಮಹಾವೀರ ಜಯಂತಿಯನ್ನು ಸೋಮವಾರ ಆಚರಿಸಲಾಯಿತು.
ಅಹಿಂಸೆ, ಸತ್ಯ, ಅಸ್ತೇಯ, ಬ್ರಹ್ಮಚರ್ಯ ಮತ್ತು ಅಪರಿಗ್ರಹ ತತ್ವಗಳನ್ನು ಸಾರಿದ ಭಗವಾನ್ ಮಹಾವೀರರ 2625ನೇ ಜನ್ಮಕಲ್ಯಾಣದ ಅಂಗವಾಗಿ ಮುಂಜಾನೆ ಕಾಲೇಜಿನ ಆವರಣದಲ್ಲಿರುವ ಭಗವಾನ್ ಮಹಾವೀರರ ಪ್ರತಿಮೆಗೆ ಪುರೋಹಿತರಾದ ಪಾಶ್ವನಾಥ ಇಂದ್ರ ಅವರ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಉಪಾಧ್ಯಕ್ಷ ಎಸ್. ಡಿ ಸಂಪತ್ ಸಾಮ್ರಾಜ್ಯ ಹಾಗೂ ಟ್ರಸ್ಟ್ ಸದಸ್ಯ ಜೆ.ಜೆ. ಪಿಂಟೋ, ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ, ಎಸ್.ಎನ್.ಎಂ. ಪಾಲಿಟೆಕ್ನಿಕ್‌ನ ಪಾಂಶುಪಾಲೆ ನೊರೋನ್ಹಾ ತರೀನ ರೀಟಾ, ಎಂ. ಅನಂತರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಧನಂಜಯ ಶೆಟ್ಟಿ, ಮಹಾವೀರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಲೆ. ವಿಜಯಲಕ್ಷ್ಮಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್, ಕಾಲೇಜಿನ ಮ್ಯಾನೇಜರ್ ರಾಜೇಶ್ ಕುಮಾರ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
