ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’
ಸಕ್ಷಮಾ ಸಂಚಾಲಕಿ ಡಾ. ಗ್ರೀಷ್ಮಾ ಆಳ್ವ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಶ್ರಮಿಸಿದ ತಂಡದ ಪರಿಶ್ರಮವನ್ನು ಪ್ರಶಂಸಿಸಿ, ಮುಂದಿನ ದಿನಗಳಲ್ಲಿ ಮಹಿಳೆಯರಿಗಾಗಿ ಇನ್ನಷ್ಟು ಅರ್ಥಪೂರ್ಣ ಹಾಗೂ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ ಎಂದರು.
ಸಕ್ಷಮಾ ಅಧ್ಯಕ್ಷೆ ಡಾ. ಅರ್ಚನಾ ಪ್ರಭಾತ್ ಸ್ವಾಗತಿಸಿದರು. ಕಾರ್ಯದರ್ಶಿ ಡಾ. ದೀಪಾ ಕೊಠಾರಿ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ವಿವಿಧ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಕಾರ್ಯಕ್ರಮವನ್ನು ನಿಯತಿ ನಿರೂಪಿಸಿ, ಸಕ್ಷಮಾ ಕ್ರೀಡಾ ಕಾರ್ಯದರ್ಶಿ ದಿವ್ಯಾ ಭಂಡಾರಿ ವಂದಿಸಿದರು.
ಮಹಿಳಾ ದಿನಾಚರಣೆ ಅಂಗವಾಗಿ ಒಂದು ತಿಂಗಳ ಕಾಲ ವಿವಿಧ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಮನರಂಜನಾ ಸ್ಪರ್ಧೆಗಳನ್ನು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಜೀವಿತಾ ಶಂಕರ್ ಮುಖ್ಯ ಅತಿಥಿಯಾಗಿ ಆಗಮಿಸಿ, ಮಹಿಳಾ ಸಿಬ್ಬಂದಿಯ ಉತ್ಸಾಹ ಹಾಗೂ ತಂಡ ಮನೋಭಾವವನ್ನು ಮೆಚ್ಚಿ, ಆರೋಗ್ಯ ಮತ್ತು ಏಕತೆಯನ್ನು ಉತ್ತೇಜಿಸುವ ಇಂತಹ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ನಡೆಯಬೇಕು ಎಂದರು.

