ಹೊಸಬೆಟ್ಟು ಅಂಬಾಡಬೆಟ್ಟು ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ
Wednesday, March 4, 2026
ಮೂಡುಬಿದಿರೆ: ಹೊಸಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಶ್ರೀ ಕ್ಷೇತ್ರ ಅಂಬಾಡಬೆಟ್ಟು ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕವು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರಗಿತು.
ಮಾರೂರು ಖಂಡಿಗ ರಾಮದಾಸ ಆಸ್ರಣ್ಣರ ನೇತೃತ್ವದಲ್ಲಿ ವಿಶೇಷ ಹೋಮ-ಹವನಗಳು, ಮಹಾಪೂಜೆಗಳು ನಡೆದು, ದೈವಗಳ ಬಿಂಬಗಳಿಗೆ ಪವಿತ್ರ ಜಲದಿಂದ ಬ್ರಹ್ಮಕುಂಭಾಭಿಷೇಕ ವಿಧಿಗಳನ್ನು ನೆರವೇರಿಸಲಾಯಿತು.
ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ, ಹೊಸಂಗಡಿ ಅರಮನೆಯ ಸುಕುಮಾರ್ ಶೆಟ್ಟಿ ಉದ್ಯಮಿ ಶ್ರೀಪತಿ ಭಟ್, ಡಾ. ಅಮರಶ್ರೀ ಅಮರನಾಥ ಶೆಟ್ಟಿ ಶ್ರೀಧರ ನಾಯಕ್, ದೈವಸ್ಥಾನ ಆನುವಂಶಿಕ ಆಡಳಿತದಾರ ಅಶೋಕ ಕಡಂಬ ಹೊಸ ಬೆಟ್ಟುಗುತ್ತು, ಬ್ರಹ್ಮಕಲಶಾಭಿಷೇಕ ಸಮಿತಿ ಅಧ್ಯಕ್ಷ ರಮೇಶ್ ಶೆಟ್ಟಿ ಬಾವಮನೆ, ಪ್ರ. ಕಾರ್ಯದರ್ಶಿ ಸುಧಾಕರ ಆಚಾರ್ಯ ಹೊಸಬೆಟ್ಟು ಸಹಿತ ವಿವಿಧ ಸಮಿತಿಗಳ ಪದಾಧಿಕಾರಿಗಳು ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು.