ಸಿ.ಎ. ಅಂತಿಮ ಪರೀಕ್ಷೆ: ಸಿ.ಎ. ಫಲಿತಾಂಶ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ
Tuesday, March 3, 2026
ಮೂಡುಬಿದಿರೆ: ಜನವರಿಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ರೋಹಿತ್ ಪಾರಡ್ಕರ್, ಅಮೋಘ್, ಗಣೇಶ್ ಪೈ, ಶುಭಂ ಕೋಟ್ಯಾನ್, ಸುಬ್ರಮಣ್ಯ ಎಸ್ ಬಿ. ಮತ್ತು ಭರತ್ ಹೆಗ್ಡೆ ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಇವರು ಸಿ.ಎ. ಅಂತಿಮ ಪರೀಕ್ಷೆಯ ಗ್ರೂಪ್-1 ಮತ್ತು ಗ್ರೂಪ್-2 ಎರಡೂ ವಿಭಾಗಗಳಲ್ಲಿ ಉತ್ತೀರ್ಣರಾಗಿ ಈ ಸಾಧನೆಯನ್ನು ಮಾಡಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಸಿ.ಎಸ್. ಸಂಯೋಜಕರು ಅಭಿನಂದಿಸಿದ್ದಾರೆ.