ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್‌ನಲ್ಲಿ ಪ್ರೇರಣಾದಾಯಕ ಉಪನ್ಯಾಸ
ಅಧ್ಯಕ್ಷತೆಯನ್ನು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಗೋಪಾಲಕೃಷ್ಣ ಕೆ.ಎಸ್. ಅವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮಹಾವೀರ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಯುವ ರೆಡ್ ಕ್ರಾಸ್ ಅಧಿಕಾರಿ ಶ್ರೀಗೌರಿ ಕೆ. ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಉಪನ್ಯಾಸದಲ್ಲಿ ಡಿಜಿಟಲ್ ಯುಗದಲ್ಲಿ ಗಮನ ಕೇಂದ್ರೀಕರಣದ ಮಹತ್ವ, ಸ್ಮರಣಶಕ್ತಿ ವೃದ್ಧಿಸುವ ಸರಳ ತಂತ್ರಗಳು ಹಾಗೂ ಜೀವನದಲ್ಲಿ ಯಶಸ್ಸು ಸಾಧಿಸಲು ಅಗತ್ಯವಾದ ಮನೋಭಾವಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ವಿವರಿಸಿದರು.
ಉಪನ್ಯಾಸದ ವಿಶೇಷತೆಯಾಗಿ ವಿವಿಧ ಚಟುವಟಿಕೆಗಳು, ಪ್ರಶ್ನೋತ್ತರ ಹಾಗೂ ನೈಜ ಜೀವನದ ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲಾಯಿತು. ಇದರಿಂದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ಪ್ರೇರಣೆ ಹಾಗೂ ಆತ್ಮವಿಶ್ವಾಸವನ್ನು ಪಡೆದುಕೊಂಡರು.
ಉದಯರಾಜ್, ಸ್ವಾಗತಿಸಿದರು. ಸೌಮ್ಯಾ ಮತ್ತು ಪ್ರಣಮ್ಯಾ, ಅತಿಥಿ ಪರಿಚಯಿಸಿದರು. ದೀಕ್ಷಿತಾ ದೀಪಿಕಾ ಕಾಯ೯ಕ್ರಮ ನಿರೂಪಿಸಿದರು. ಪ್ರಜ್ವಲ್ ವಂದಿಸಿದರು.
ಸಿವಿಲ್ ಕ್ಲಬ್ ಸಂಯೋಜಕಿ ಸುಪ್ರಿಯಾ ಎಸ್. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ ಸಿವಿಲ್ ಹಾಗೂ ಮೆಕಾಟ್ರಾನಿಕ್ಸ್ ವಿಭಾಗದ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
