ಬಂಟರ ಮಹಿಳಾ ಘಟಕದಿಂದ ಮಹಿಳಾ ದಿನಾಚರಣೆ
Monday, March 30, 2026
ಮೂಡುಬಿದಿರೆ: ಇಲ್ಲಿನ ಬಂಟರ ಮಹಿಳಾ ಘಟಕದ ವತಿಯಿಂದ ಭಾನುವಾರ ಹೋಟೆಲ್ ಪಂಚರತ್ನ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಕಳದ ಎಸ್. ವಿ.ಟಿ ಮಹಿಳಾ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲೆ ಮಿತ್ರಪ್ರಭಾ ಹೆಗ್ಡೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಸಾಮಾಜಿಕ ಜೀವನದಲ್ಲಿ ಮಹಿಳೆಯರ ಪಾತ್ರದ ಕುರಿತು ಮಾತನಾಡುತ್ತಾ ಕುಟುಂಬ ವ್ಯವಸ್ಥೆ ಹಾಗೂ ಸಾಮಾಜಿಕ ಜೀವನದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ವಿವರಿಸಿದರು.
ಕೋಶಾಧಿಕಾರಿ ಗೀತಾ ಪಿ ಶೆಟ್ಟಿ ಹಾಗೂ ಕಾರ್ಯದರ್ಶಿ ಸಂಗೀತಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ ಸ್ವಾಗತಿಸಿದರು. ಜಯಲಕ್ಷ್ಮಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ಮಹಿಳೆಯರಿಗಾಗಿ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಯಿತು.