ಯುವವಾಹಿನಿ ಮೂಡುಬಿದಿರೆ ಘಟಕದ ಕಾಯ೯ಕಾರಿ ಸಮಿತಿಯ ಪದಗ್ರಹಣ
ಅವರು ಯುವ ವಾಹಿನಿ ಮೂಡುಬಿದಿರೆ ಘಟಕ ಇದರ 2026 -27ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಮೂಡುಬಿದಿರೆ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಮೃತ ಸಭಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.
ಮೂಡುಬಿದಿರೆ ಯುವ ವಾಹಿನಿ ಘಟಕದ ನಿಕಟಪೂರ್ವ ಅಧ್ಯಕ್ಷ ಮುರಳೀಧರ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ನೂತನ ಪದಾಧಿಕಾರಿಗಳಿಗೆ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಪ್ರತಿಜ್ಞಾ ವಿಧಿ ಬೋಧಿಸಿದರು.
ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಮೂಡುಬಿದಿರೆ ಪುರಸಭಾ ಮಾಜಿ ಉಪಾಧ್ಯಕ್ಷ ಸುರೇಶ್ ಕೋಟ್ಯಾನ್, ಯೋಜನಾ ಪ್ರಾಧಿಕಾರ ಸದಸ್ಯ ಶೇಖರ್ ಪೂಜಾರಿ ಬೊಳ್ಳಿ ಮುಖ್ಯ ಅತಿಥಿಗಳಾಗಿದ್ದರು.
ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಶ್ ಕೆ ಪೂಜಾರಿ, ಕೇಂದ್ರ ಸಮಿತಿ ಮಂಗಳೂರು ಸಂಘಟನಾ ಕಾರ್ಯದರ್ಶಿ ಶುಭಕರ ಪೂಜಾರಿ ಗೌರವ ಉಪಸ್ಥಿತಿ ಹೊಂದಿದ್ದರು.
ದಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರುಕ್ಕಯ್ಯ ಪೂಜಾರಿ ಅಳಿಯೂರು ಮತ್ತು ಗೋಪಾಲ್ ಏ. ಕೋಟ್ಯಾನ್ ಮಾರೂರು ಹಾಗೂ ಹಿರಿಯ ನಾಟಿ ವೈದ್ಯೆ ಗಿರಿಜಾ ಕೋಟ್ಯಾನ್ ಕಡಂದಲೆ ರಿಗೆ ಶಾಲು ಹೊದಿಸಿ ಫಲ ಪುಷ್ಪ ಸನ್ಮಾನ ಪತ್ರದೊಂದಿಗೆ ಗೌರವಿಸಲಾಯಿತು.
ಜಗದೀಶ್ ಚಂದ್ರ ಡಿಕೆ ಸ್ವಾಗತಿಸಿ, ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ವಿನೀತ್ ಸುವರ್ಣ ವರದಿ ಮಂಡಿಸಿದರು.
ಮಾಜಿ ಅಧ್ಯಕ್ಷರಾದ ಶಂಕರ್ ಕೋಟ್ಯಾನ್, ಸುಶಾಂತ್ ಕರ್ಕೇರಾ, ನಿಯೋಜಿತ ಅಧ್ಯಕ್ಷ ಗಿರೀಶ್ ಕೋಟ್ಯಾನ್, ಕಾರ್ಯದರ್ಶಿ ಅಶ್ವಿನ್ ಪೂಜಾರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.