ಮೂಡುಬಿದಿರೆ ಇನ್ಸ್ ಪೆಕ್ಟರ್ ಪ್ರಕರಣ ಸಿಐಡಿಗೆ
ಸಂದೇಶ್ ಅವರಿಂದ ಲೈಂಗಿಕ ಕಿರುಕುಳ, ದೌರ್ಜನ್ಯ ನಡೆದಿದೆ ಎಂದು ಇತ್ತೀಚೆಗೆ ಕೆಲವು ಮಹಿಳೆಯರು ಆರೋಪಿಸಿ ಮಾಧ್ಯಮಗಳ ಮೂಲಕ ಹೇಳಿಕೆಯನ್ನು ನೀಡಿದ್ದರು. ಆದರೆ ಈ ಬಗ್ಗೆ ತನಿಖೆ ನಡೆಸಿದ ಮಂಗಳೂರು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಆರೋಪಗಳು ದೂರುದಾರರನ್ನು ತನಿಖೆ ನಡೆಸಿ ಲೈಂಗಿಕ ಕಿರುಕುಳದ ಆರೋಪಗಳು ಸಂಪೂಣ೯ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಹೇಳಿಕೆ ನೀಡಿದ್ದರು.
ಈ ಎಲ್ಲಾ ಘಟನೆಗಳ ಮಧ್ಯೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕಿಯೊಬ್ಬರು ತನ್ನ ಮೇಲೆ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ. ಜಿ. ಅವರು 2018ರಿಂದ 2023ರ ನಡುವೆ ಮನೆಗೆ ಬಂದು ಅತ್ಯಾಚಾರ ನಡೆಸಿದ್ದಾರೆಂದು ಮಾ. 21ರಂದು ಸಂಜೆ ವೇಣೂರು ಠಾಣೆಗೆ ದೂರು ನೀಡಿದ್ದು ಅದರಂತೆ ವೇಣೂರು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಅವರ ರಾಜ್ಯಾದ್ಯಂತ ಸುದ್ಧಿಯಾಗಿರುವ ಈ ಪ್ರಕರಣವನ್ನು ಪೊಲೀಸ್ ಮಹಾನಿರ್ದೇಶಕರಿಗೆ ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಸಿಐಡಿಗೆ ಒಪ್ಪಿಸುವಂತೆ ಸೂಚಿಸಿದ್ದಾರೆ.