ಮೂಡುಬಿದಿರೆ ಸರಕಾರಿ ಆಸ್ಪತ್ರೆಗೆ ತಜ್ಞ ವೈದ್ಯಾಧಿಕಾರಿಗಳನ್ನು ನೇಮಿಸಿ: ಅರೋಗ್ಯ ಸಚಿವರಿಗೆ ರಾಜೇಶ್ ಕಡಲಕೆರೆ ಮನವಿ
Saturday, March 14, 2026
ಮೂಡುಬಿದಿರೆ: ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗಿದ್ದು ಈಗಿರುವ ಮುಖ್ಯ ವೈದ್ಯಾಧಿಕಾರಿಯವರು ಡೆಂಟಲ್ ಡಾಕ್ಟರ್ ಆಗಿದ್ದು ಉಳಿದ ರೋಗಗಳಿಗೆ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದ್ದು, ಶವದ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಜನಸಾಮಾನ್ಯರು ಪರದಾಟ ಮಾಡುವ ಸಂದರ್ಭ ಎದುರಾಗಿದ್ದು ತಕ್ಷಣವೇ ತಜ್ಞ ವೈದ್ಯರನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಗೆ ನೇಮಿಸುವಂತೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರು ಹಾಗೂ ಅರೋಗ್ಯ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರಲ್ಲಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಅಗ್ರಹಿಸಿದ್ದಾರೆ.