ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ
Wednesday, March 4, 2026
ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ)ನಲ್ಲಿ ವಿದ್ಯಾರ್ಥಿ ಸಂಘ ಮತ್ತು ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ವಿದ್ಯಾರ್ಥಿಗಳ ಪ್ರತಿಭೆಗಳನ್ನು ಅನಾವರಣಗೊಳಿಸುವ ಅಪೂರ್ವ ಪ್ರದರ್ಶನದಲ್ಲಿ 41 ತಂಡಗಳು ತಮ್ಮ ಪ್ರದರ್ಶನವನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಅವರು ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಮಾನಸಿಕ ದೃಢತೆಗೆ ಸಹಕಾರಿ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡು, ಎಲ್ಲಾ ವೇದಿಕೆಗಳಲ್ಲೂ ತಮ್ಮ ಪ್ರತಿಭೆಗಳ ಮೂಲಕ ಗುರುತಿಸಿಕೊಳ್ಳಬೇಕು ಎಂದು ಹಾರೈಸಿದರು.
ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಡಾ. ವಿಜಯ್ ಕುಮಾರ್ ಮೊಳೆಯರ್, ಡಾ. ನೋರ್ಬರ್ಟ್ ಮಸ್ಕರೇನ್ಹಸ್ ಕುಲಸಚಿವರು (ಶೈಕ್ಷಣಿಕ), ಡಾ. ವಿನಯಚಂದ್ರ ಕುಲಸಚಿವರು (ಪರೀಕ್ಷಾಂಗ), ವಿದ್ಯಾರ್ಥಿ ಕ್ಷೇಮಪಾಲಾನಾಧಿಕಾರಿಗಳಾದ ಡಾ. ರಾಧಾಕೃಷ್ಣ ಗೌಡ ಮತ್ತು ಸ್ಪರ್ಲ್ ಫಿಯೋನಾ ಪಿರೇರಾ ಉಪಸ್ಥಿತರಿದ್ದರು.
ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುಝಮ್ಮಿಲ್ ಸ್ವಾಗತಿಸಿ, ಕಾರ್ಯದರ್ಶಿ ಯೂಸುಫ್ ಅಲ್ಫಾಜ್ ವಂದಿಸಿದರು. ಜೊತೆ ಕಾರ್ಯದರ್ಶಿ ಹಿಬಾ ಶೇಕ್ ಕಾರ್ಯಕ್ರಮ ನಿರೂಪಿಸಿದರು. ಪ್ರತಿಭಾ ಪ್ರದರ್ಶನದಲ್ಲಿ ಭರತನಾಟ್ಯ, ಯಕ್ಷಗಾನ, ಕಥಕ್ ವಿವಿಧ ಜಾನಪದ ಮತ್ತು ಪಾಶ್ಚಾತ್ಯ ನೃತ್ಯಗಳು ಪ್ರದರ್ಶನಗೊಂಡವು.

