ಫಾರ್ಮಾಸಿಟಿಕಲ್ ಕೆಮಿಸ್ಟ್ರಿ ಸರ್ಟಿಫಿಕೇಟ್ ಕೋರ್ಸ್‌ಗಳ ಉದ್ಘಾಟನೆ

ಫಾರ್ಮಾಸಿಟಿಕಲ್ ಕೆಮಿಸ್ಟ್ರಿ ಸರ್ಟಿಫಿಕೇಟ್ ಕೋರ್ಸ್‌ಗಳ ಉದ್ಘಾಟನೆ


ಪುತ್ತೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪದವಿ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ನೀಡುವುದು ಅನಿವಾರ್ಯ. ಫಾರ್ಮಾಸಿಟಿಕಲ್ ಕೆಮಿಸ್ಟ್ರಿ ಯಂತಹ ಸರ್ಟಿಫಿಕೇಟ್ ಕೋರ್ಸ್‌ಗಳು ವಿದ್ಯಾರ್ಥಿಗಳಿಗೆ ಕೌಶಲ್ಯಪೂರ್ಣ ಅನುಭವವನ್ನು ನೀಡುತ್ತವೆ. ಇಂತಹ ಕೋರ್ಸ್ಗಳು ಪದವೀಧರರನ್ನು ನಿರುದ್ಯೋಗದಿಂದ ಹೊರಗಿಡುತ್ತವೆ ಎಂದು ಮಂಗಳೂರಿನ ಸೌತ್ ಕೆನರಾ ಕೆಮಿಸ್ಟ್ಸ್ ಮತ್ತು ಡ್ರಗ್ಗಿಸ್ಟ್ ಮಾಲೀಕರು ಹಾಗೂ ಉಪಾಧ್ಯಕ್ಷ ಅಮೃತ್ ಕಿರಣ್ ರೈ ಹೇಳಿದರು.


ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಪುತ್ತೂರು ಇಲ್ಲಿನ ರಾಸಾಯನ ಶಾಸ್ತ್ರ ವಿಭಾಗವು ಶುಕ್ರವಾರ ಆಯೋಜಿಸಿದ ಫಾರ್ಮಾಸಿಟಿಕಲ್ ಕೆಮಿಸ್ಟ್ರಿ ಸರ್ಟಿಫಿಕೇಟ್ ಕೋರ್ಸ್‌ಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಅವಶ್ಯವಿರುವ ಇಂತಹ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಕಾಲೇಜು ಸದಾ ಜೊತೆಯಾಗಿರುತ್ತದೆ. ವಿದ್ಯಾರ್ಥಿಗಳು ಕೇವಲ ಪಠ್ಯಗಳಿಗೆ ಮಾತ್ರ ಸೀಮಿತವಾಗಿರದೆ ಕೈಗಾರಿಕಾ ಜ್ಞಾನವನ್ನು ಪಡೆಯಬೇಕು ಎಂದರು. ಹಾಗೂ ಕೋರ್ಸ್‌ಗೆ ವಿದ್ಯಾರ್ಥಿಗಳು ತೋರಿದ ಆಸಕ್ತಿಯನ್ನು ಅಭಿನಂದಿಸಿದರು.

ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಮಾಲಿನಿ ಕೆ. ಸ್ವಾಗತಿಸಿ, ರಚನಾ ಹಾಗೂ ಬಳಗದವರು ಪ್ರಾರ್ಥಿಸಿದರು. ಕೋರ್ಸ್ ಸಂಯೋಜಕ ಡಾ. ಎಡ್ವಿನ್ ಎಸ್. ಡಿ’ಸೋಜ ವಂದಿಸಿ, ವಿದ್ಯಾರ್ಥಿನಿ ನಿಫಾನ ಕಾರ್ಯಕ್ರಮವನ್ನು ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article