ಮಂಗಳೂರು ವಿಶ್ವವಿದ್ಯಾಲಯ ಪವರ್ಲಿಫ್ಟಿಂಗ್‌ನಲ್ಲಿ ರಂಜಿತ್‌ಗೆ ಬೆಳ್ಳಿ ಪದಕ
Wednesday, March 25, 2026
ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪವರ್ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿಎ ವಿದ್ಯಾರ್ಥಿ ರಂಜಿತ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಮಂಗಳೂರಿನ ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶ್ನಿ ನಿಲಯದಲ್ಲಿ ಈ ಸ್ಪರ್ಧೆ ನಡೆಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ರಂಜಿತ್ ಅವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.