ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ
ಬಂಧಿತನನ್ನು ರಾಘವನ್ ಯಾನೆ ಕೋಳಿಕರಣ್ ಎಂದು ಗುರಿತಿಸಲಾಗಿದೆ.
ಪ್ರಕರಣದ ವಿವರ:
ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಆರೋಪಿಯ ವಿರುದ್ಧ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಈ ಪ್ರಕರಣದ ವಿಚಾರಣೆಯು ಸುಳ್ಯದ ಎಸ್‌ಸಿಜೆ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯದಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ಬಿ. ಮೋಹನ್ ಬಾಬು ಅವರು ಆರೋಪಿಗೆ ಕಲಂ 121(1) ರಡಿಯಲ್ಲಿ ೩ ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 10,000 ರೂ. ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ.
ಕಲಂ 132 ರಲ್ಲಿ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಲು ಮಾಡಿದ ಹಲ್ಲೆಗಾಗಿ 1 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 10,000 ರೂ. ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ.
ಕಲಂ262 ರಲ್ಲಿ ಕಾನೂನುಬದ್ಧವಾಗಿ ವಶಕ್ಕೆಪಡೆಯುವ ಸಂದರ್ಭದಲ್ಲಿ ತಡೆಯುಂಟು ಮಾಡಿದ್ದಕ್ಕಾಗಿ 1 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 10,000 ರೂ. ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಪ್ರೀತಿ ಎಂ.ಸಿ. ಅವರು ಸಮರ್ಥವಾಗಿ ವಾದ ಮಂಡಿಸಿದ್ದಾರೆ.