ಅಡಿಕೆ ಮತ್ತು ರಬ್ಬರ್ ಬೆಳೆಗಾರರಿಗೆ ಪ್ಯಾಕೇಜ್ ಘೋಷಣೆ ಮಾಡದ ನಿರಾಶಾದಾಯಕ ಬಜೆಟ್: ಶಾಸಕಿ ಭಾಗೀರಥಿ ಮುರುಳ್ಯ

ಅಡಿಕೆ ಮತ್ತು ರಬ್ಬರ್ ಬೆಳೆಗಾರರಿಗೆ ಪ್ಯಾಕೇಜ್ ಘೋಷಣೆ ಮಾಡದ ನಿರಾಶಾದಾಯಕ ಬಜೆಟ್: ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ಸಂಕಷ್ಟದಲ್ಲಿರುವ ದ.ಕ ಜಿಲ್ಲೆಯ ಅಡಿಕೆ ಮತ್ತು ರಬ್ಬರ್ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡದ ನಿರಾಶಾದಾಯಕ ಬಜೆಟ್ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.

ಬಜೆಟ್‌ನ ಬಹುಪಾಲು ಯೋಜನೆಗಳು ಬೆಂಗಳೂರು ಕೇಂದ್ರಿತವಾಗಿದ್ದು, ಕರಾವಳಿ ಕರ್ನಾಟಕ,ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಭಾಗಗಳಿಗೆ ಕೇವಲ ಅಲ್ಪ ಅನುದಾನ ನೀಡಿ ಕೈತೊಳೆದುಕೊಳ್ಳಲಾಗಿದೆ. ಎರಡನೇ ವಿಮಾನ ನಿಲ್ದಾಣದಂತಹ ದೊಡ್ಡ ಯೋಜನೆಗಳು ಬೆಂಗಳೂರಿಗೇ ಸೀಮಿತವಾಗುತ್ತಿರುವುದು ಪ್ರಾದೇಶಿಕ ಅಸಮತೋಲನವನ್ನು ಎತ್ತಿ ತೋರಿಸುತ್ತದೆ.

ಒಟ್ಟಾರೆಯಾಗಿ, 2026ರ ಬಜೆಟ್ ದೂರದೃಷ್ಟಿಯ ಕೊರತೆಯಿಂದ ಕೂಡಿದೆ. ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳುವ ಹೆಸರಿನಲ್ಲಿ ಸಾಮಾನ್ಯ ಜನರ ಮೇಲೆ ತೆರಿಗೆಯ ಹೊರೆ ಅಥವಾ ಪರೋಕ್ಷ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರವು ಕೇವಲ ಅಂಕಿ-ಅಂಶಗಳ ಮೂಲಕ ಜನರನ್ನು ಮರುಳು ಮಾಡದೆ, ಪ್ರಾಯೋಗಿಕ ಅಭಿವೃದ್ಧಿಗೆ ಒತ್ತು ನೀಡಬೇಕಿದೆ ಎಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article