ಕಿಡಿಗೇಡಿಯ ವಿರುದ್ಧ ಕಠಿಣ ಕ್ರಮಕ್ಕೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಆಗ್ರಹ
Tuesday, March 3, 2026
ಉಳ್ಳಾಲ: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಶಂಕರ್ ಎಂಬ ಹೆಸರಿನಲ್ಲಿ ಸಂದೇಶ ಹಾಕಿದ ಕಿಡಿಗೇಡಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.
ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ಕೆಸಿ ರೋಡ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಿಕಾ ರೈ, ಕೋಟೆಕಾರ್ ಉಳ್ಳಾಲ ಕ್ಷೇತ್ರದಲ್ಲಿ ಎಲ್ಲಾ ಜಾತಿ, ಧರ್ಮದ ಜನರು ಶಾಂತಿ ಸೌಹಾರ್ದತೆ ಹಾಗೂ ಅನೋನ್ಯತೆಯಿಂದ ಜೀವಿಸುತ್ತಿದ್ದಾರೆ.
ಕ್ಷೇತ್ರದ ಶಾಸಕ, ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕೆಲ ಕಿಡಿಗೇಡಿಗಳು ಇಂತಹ ಕೃತ್ಯ ಎಸಗುತ್ತಿರುವುದು ಖಂಡನೀಯ.
ಪೊಲೀಸ್ ಇಲಾಖೆ ಕೂಡಲೇ ಈ ಕಿಡಿಗೇಡಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.