ಪುತ್ತೂರು ‘ಪುತ್ರ ಭಾಗ್ಯ’ ಪ್ರಕರಣ: ಸಂತ್ರಸ್ತೆಗೆ ಪ್ರತೀ ತಿಂಗಳು 75 ಸಾವಿರ ರೂ. ಜೀವನಾಂಶ

ಪುತ್ತೂರು ‘ಪುತ್ರ ಭಾಗ್ಯ’ ಪ್ರಕರಣ: ಸಂತ್ರಸ್ತೆಗೆ ಪ್ರತೀ ತಿಂಗಳು 75 ಸಾವಿರ ರೂ. ಜೀವನಾಂಶ


ಬೆಂಗಳೂರು: ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಅರ್ಜಿದಾರ ಆರೋಪಿಯು ಸ್ವತಃ ಅಥವಾ ತನ್ನ ಪೋಷಕರ ಮೂಲಕ ಸಂತ್ರಸ್ತೆ ಹಾಗೂ ಮಗುವಿನ ಅಗತ್ಯತೆಗಳನ್ನು ಪೂರೈಸಲು ಪ್ರತೀ ತಿಂಗಳು 75 ಸಾವಿರ ರೂ. ಪಾವತಿಸಬೇಕು ಎಂಬ ಷರತ್ತಿಗೆ ಒಳಪಟ್ಟು ಪ್ರಕರಣದ ಮುಂದಿನ ಎಲ್ಲ ಪ್ರಕ್ರಿಯೆಯಗಳಿಗೆ ನ್ಯಾಯಾಲಯ ತಡೆ ನೀಡಿದೆ.

ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ. ಜೊತೆಗೆ, ಅರ್ಜಿದಾರರು ಮುಂದಿನ ಒಂದು ವಾರದ ಒಳಗೆ ಸಂತ್ರಸ್ತೆಗೆ 75 ಸಾವಿರ ರೂ.ಗಳನ್ನು ಪಾವತಿಸಬೇಕು. ಅದಾದ ನಂತರ ಪ್ರತೀ ತಿಂಗಳು ಹಣ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article