ಬಿ. ಮೂಡ ಸರಕಾರಿ ಪದವಿಪೂರ್ವ ಕಾಲೇಜು 92.05 ಫಲಿತಾಂಶ
Friday, April 10, 2026
ಬಂಟ್ವಾಳ: ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳ ಬಿ. ಮೂಡ ಸರಕಾರಿ ಪದವಿಪೂರ್ವ ಕಾಲೇಜು 92.05 ಫಲಿತಾಂಶ ದಾಖಲಿಸಿದೆ.
ಕಾಲೇಜಿನ 264 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 243 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 54 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿರುತ್ತಾರೆ. ಕಲಾ ವಿಭಾಗದಲ್ಲಿ 72 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 60 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 142 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 134 ಮಂದಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ 50 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 49 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.
ಕಲಾ ವಿಭಾಗದಲ್ಲಿ ಹೇಮಶ್ರೀ 562 ಅಂಕಗಳು, ವಾಣಿಜ್ಯ ವಿಭಾಗದಲ್ಲಿ ಭವಿತ್ 579 ಅಂಕಗಳು ಮತ್ತು ವಿಜ್ಞಾನ ವಿಭಾಗದಲ್ಲಿ ಪ್ರೇಕ್ಷಾ 576 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲ ಯೂಸುಫ್ ವಿಟ್ಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.