ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿಗೆ 95.83% ಫಲಿತಾಂಶ

ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿಗೆ 95.83% ಫಲಿತಾಂಶ


ಬಂಟ್ವಾಳ: ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ 48 ವಿದ್ಯಾರ್ಥಿಗಳು ಹಾಜರಾಗಿದ್ದು, 46 ವಿದ್ಯಾರ್ಥಿಗಳು ತೇರ್ಗಡೆಯಾಗಿ 95.83% ಫಲಿತಾಂಶ ದಾಖಲಿಸಿದ್ದಾರೆ.

10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು,22 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ಕಲಾ ವಿಭಾಗದಲ್ಲಿ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,ಎಲ್ಲ ವಿದ್ಯಾರ್ಥಿಗಳೂ ತೇರ್ಗಡೆಯಾಗಿ 100% ಫಲಿತಾಂಶ ದಾಖಲಿಸಿದ್ದಾರೆ.ಕೆ.ನಾಫಿಯಾ ಮರಿಯಂ 558 ಅಂಕಗಳೊಂದಿಗೆ ಪ್ರಥಮ ಸ್ಥಾನ, ಮಿಸ್ಬಾ 499 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದ 26 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 96.15% ದಾಖಲಿಸಿದ್ದಾರೆ.7 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು,ಫಾತಿಮತ್ ಶಲ್ಬಾನಾ 581 ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ ಧನುಶ್ರೀ 560 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.ವಿಜ್ಞಾನ ವಿಭಾಗದ 12 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು 91.66% ದಾಖಲಿಸಿದ್ದಾರೆ.

ಇಬ್ಬರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿದ್ದು ನಿನಾದ್ 566 ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ ತ್ರಿಶೂಲ್ ಮೊಯಿಲಿ 539  ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article