ನಿರೂಪಣೆ ವೇಳೆ ಕುಸಿದುಬಿದ್ದು ಯುವಕ ಮೃತ್ಯು
Saturday, April 11, 2026
ಬಂಟ್ವಾಳ: ಯುವ ನಿರೂಪಕನೋರ್ವ ಮೆಹಂದಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮೃತನನ್ನು ಫರಂಗಿಪೇಟೆ ಸಮೀಪದ ಅಬ್ಬೆಟ್ಟು ನಿವಾಸಿ ಅಶ್ವಥ್ (32) ಎಂದು ಹೆಸರಿಸಲಾಗಿದೆ.
ಈತ ನಾಯಿಲದಲ್ಲಿ ಸಂಬಂಧಿಕರ ಮನೆಯಲ್ಲಿ ನಡೆದ ಮದರಂಗಿ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದ ವೇಳೆ ಹಠಾತ್ ಕುಸಿದು ಬಿದ್ದಿದ್ದಾರೆ, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತ ಪಟ್ಟಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.