ಕುಸಿದು ಬಿದ್ದು ಬಸ್ ಚಾಲಕ ಮೃತ್ಯು
Monday, April 20, 2026
ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಚಾಲಕರೋರ್ವರು ವಿಶ್ರಾಂತಿ ಗ್ರಹದ ಬಳಿ ವಾಕಿಂಗ್ ಮಾಡುತ್ತಿದ್ದ ಸಮಯ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಸಂಭವಿಸಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಿವಾಸಿ ಲಾಡಲೇಪಟೇಲ್ ಮೃತಪಟ್ಟವರಾಗಿದ್ದಾರೆ. ಕಳೆದ 16 ವರ್ಷದಿಂದ ಕೆಎಸ್‌ಆರ್‌ಟಿಸಿ ಬಿ.ಸಿ.ರೋಡು ಡಿಪ್ಪೂದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಭಾನುವಾರ ಕರ್ತವ್ಯ ಮುಗಿಸಿ ತನ್ನು ವಿಶ್ರಾಂತಿಗೃಹದಲ್ಲಿದ್ದು, ರಾತ್ರಿ 7 ಗಂಟೆಯ ಹೊತ್ತಿಗೆ ವಿಶ್ರಾಂತಿ ಗ್ರಹದ ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ಹಠಾತ್ ಕುಸಿದು ಬಿದ್ದವರನ್ನು ತಕ್ಷಣ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.