ದ್ವಿಚಕ್ರ ವಾಹನ ಕಳವು ಆರೋಪಿಗಳಿಬ್ಬರ ಬಂಧನ

ದ್ವಿಚಕ್ರ ವಾಹನ ಕಳವು ಆರೋಪಿಗಳಿಬ್ಬರ ಬಂಧನ


ಬಂಟ್ವಾಳ: ಬಿ.ಸಿ. ರೋಡಿನ ಪರ್ಲಿಯಾ ಬಳಿರುವ ವಸತಿ ಗೃಹವೊಂದರ ಮುಂಭಾಗದಲ್ಲಿ ನಿಲುಗಡೆಗೊಳಿಸಲಾಗಿದ್ದ ದ್ವಿಚಕ್ರ ವಾಹನವೊಂದನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಿವಾಸಿ ಹಸನ್ ಬಾವ (55) ಹಾಗೂ ಬಿ. ಮೂಡಗ್ರಾಮದ ನಿವಾಸಿ ಮೊಹಮ್ಮದ್ ಇರ್ಷಾದ್ (37) ಬಂಧಿತ ಆರೋಪಿಗಳಾಗಿದ್ದಾರೆ.

2026 ರ ಮಾ.21 ರಂದು ಬಿ.ಸಿ.ರೋಡಿಗೆ ಸಮೀಪದ ಪರ್ಲಿಯಾ ಬಳಿರುವ ವಸತಿಗೃಹದ ಶೆಡ್‌ನಲ್ಲಿ ನಿಲುಗಡೆಗೊಳಿಸಲಾಗಿದ್ದ ದ್ವಿಚಕ್ರ ವಾಹನವನ್ನು  ಕಳವುಗೈಯಲಾಗಿದ್ದು, ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿತ್ತು.

ಆರೋಪಿಗಳ ಮಾಹಿತಿ ಕಲೆಹಾಕಿ ಬೆನ್ನು ಹತ್ತಿದ ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಕಳವಾದ ದ್ವಿಚಕ್ರ ವಾಹನವನ್ನು ವಶಪಡಿಸಿದ್ದಾರೆ ಬಂಧಿತರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article