ದೇಶದ ಪ್ರಗತಿಯಿಂದ ನಮ್ಮ ಉದ್ಧಾರ: ಗೋಪಾಲಕೃಷ್ಣ ನೇರಳೆಕಟ್ಟೆ

ದೇಶದ ಪ್ರಗತಿಯಿಂದ ನಮ್ಮ ಉದ್ಧಾರ: ಗೋಪಾಲಕೃಷ್ಣ ನೇರಳೆಕಟ್ಟೆ


ಬಂಟ್ವಾಳ: ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ಧಾರದಲ್ಲೇ ನಮ್ಮ ಉದ್ಧಾರ ಎಂದು ಹೇಳಿದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್ ಅವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ಹೋರಾಡುವವರಿಗೆ ಜಗಜೀವನ ರಾಮ್ ಪ್ರೇರಣೆಯಾಗಿದ್ದಾರೆ ಎಂದು ನಾರ್ಶಮೈದಾನ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೇರಳೆಕಟ್ಟೆ ಹೇಳಿದರು.

ಅವರು ಬಿ.ಸಿ. ರೋಡಿನ ಎಸ್.ಜಿ.ವೈ. ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಾಗೂ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಭಾನುವಾರ ಏರ್ಪಡಿಸಲಾದ ಮಾಜಿ ಉಪಪ್ರಧಾನಿ ಡಾ.ಜಗಜೀವನ ರಾಂ ಅವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಕೆ.ಬಿ., ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಜಗಜೀವನ ರಾಂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಗಜೀವನ ರಾಂ ಸ್ಮರಣೆ ಮಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಉಪಸ್ಥಿತರಿದ್ದು ಶುಭಹಾರೈಸಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಿನಯ ಕುಮಾರಿ ಸ್ವಾಗತಿಸಿದರು. ಮೇಲ್ವಿಚಾರಕ ಪ್ರಸಾದ ನಿರೂಪಿಸಿ, ವಂದಿಸಿದರು. ವಸತಿ ಶಾಲೆಯ ಶಿಕ್ಷಕರು ನಾಡಗೀತೆ ಹಾಡಿದರು. ಮೊಡಂಕಾಪು ಮತ್ತು ಪಾಣೆಮಂಗಳೂರಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article