ತುಂಬೆಯಲ್ಲಿ ಸರಣಿ ಅಪಘಾತ: ಓರ್ವನಿಗೆ ಗಾಯ
Monday, April 13, 2026
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ತುಂಬೆಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರು, ಗೂಡ್ಸ್ ರಿಕ್ಷಾ ಹಾಗೂ ಬೈಕ್‌ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ನಾವೂರ ಸಮೀಪದ ಮೈಂದಾಳ ನಿವಾಸಿ ಮಹಮ್ಮದ್ ಅನ್ಸಾರ್ ಎಂಬವರು ಗಾಯಗೊಂಡವರಾಗಿದ್ದಾರೆ.
ಮಂಗಳೂರು ಕಡೆಯಿಂದ ಬಿ.ಸಿ.ರೋಡಿನತ್ತ ಬರುತಿದ್ದ ಕಾರು ತುಂಬೆಯಲ್ಲಿ ಏಕಾಏಕಿ ಬ್ರೇಕ್ ಹಾಕಿದಾಗ ಅದರ ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ರಿಕ್ಷಾ ಕಾರಿಗೆ ಢಿಕ್ಕಿಯಾಗಿದೆ.
ಆಗ ಇದರ ಹಿಂದಿನಿಂದ ಬರುತ್ತಿದ್ದ ಬೈಕ್ ಗೂಡ್ಸ್ ರಿಕ್ಷಾಕ್ಕೆ ಢಿಕ್ಕಿಯಾಗಿದೆ. ಇದರ ಪರಿಣಾಮ ಬೈಕ್ ಪಲ್ಟಿಯಾಗಿದ್ದು, ಸವಾರ ರಸ್ತೆಗೆ ಬಿದ್ದು ಗಾಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಗಾಯಾಳು ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.