ರೋಗನಿರೋಧಕ ಶಕ್ತಿ ಹೆಚ್ಚಾಗಲು ಪೌಷ್ಠಿಕ ಆಹಾರ ಸೇವನೆ ಅಗತ್ಯ: ಅನಿಲ್ ಕುಮಾರ್ ಎಸ್. ಭೂಮರೆಡ್ಡಿ

ರೋಗನಿರೋಧಕ ಶಕ್ತಿ ಹೆಚ್ಚಾಗಲು ಪೌಷ್ಠಿಕ ಆಹಾರ ಸೇವನೆ ಅಗತ್ಯ: ಅನಿಲ್ ಕುಮಾರ್ ಎಸ್. ಭೂಮರೆಡ್ಡಿ


ಬಂಟ್ವಾಳ: ನಾವು ತಿನ್ನುವ ಆಹಾರವೇ ನಮ್ಮ ದೇಹಕ್ಕೆ ಔಷಧಿಯಾಗಿ ಪರಿವರ್ತನೆಯಾದರೆ ಪ್ರತ್ಯೇಕ ಔಷಧಿಯ ಅಗತ್ಯವಿಲ್ಲ. ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಬೇಕಾದರೆ ಪೌಷ್ಠಿಕ ಆಹಾರ ಸೇವನೆ ಅಗತ್ಯ ಎಂದು ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಹೇಳಿದರು.

ಅವರು ಏ.5 ರಂದು ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆದ ಕ್ಷಯ ರೋಗಿಗಳಿಗೆ ಆಹಾರ ದವಸಧಾನ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕ್ಷಯ ರೋಗಿಗಳು ಪೌಷ್ಠಿಕ ಆಹಾರವನ್ನು ಹೆಚ್ಚು ಸೇವಿಸಿದಾಗ ಅವರು ರೋಗ ಮುಕ್ತರಾಗಿ ಉತ್ತಮ ಜೀವನ ನಡೆಸಲು ಸಾಧ್ಯವಿದೆ ಎಂದರು.

ಪುದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಡಾ. ಸ್ಕೃತಿ ಯು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪ್ರಧಾನ ಮಂತ್ರಿಯವರ ಆಶಯದಂತೆ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರವನ್ನು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸೇವಾಂಜಲಿ ಸಂಸ್ಥೆ ನೀಡುತ್ತಿರುವುದು ಅಭಿನಂದನೀಯ. ಸ್ವಾರ್ಥ ರಹಿತ ಮನೋಭಾವದ ಕೃಷ್ಣ ಕುಮಾರ್ ಪೂಂಜ ನಮ್ಮ ಗ್ರಾಮದಲ್ಲಿರುವುದು ನಮ್ಮ ಹೆಮ್ಮೆ ಎಂದು ತಿಳಿಸಿದರು.

ಸೇವಾಂಜಲಿ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ನಿರ್ದೇಶಕ ಅರ್ಜುನ್ ಪೂಂಜ, ಪದ್ಮನಾಭ ಶೆಟ್ಟಿ ಪುಂಚಮೆ, ನಾರಾಯಣ ಬಗ್ಗೂರು, ದಿನೇಶ್ ಶೆಟ್ಟಿ ಕೊಟ್ಟಿಂಜ, ಪ್ರಶಾಂತ್ ತುಂಬೆ, ಮೋಹನ್ ಬೆಂಜನಪದವು, ಶಿವರಾಜ್ ಸುಜೀರ್, ಮಧುರಾಜ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article