ಫೆ.18 ರಿಂದ ಫೆ.28 ರವರಗೆ ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ
ದಿನಾಂಕ ಘೋಷಿಸಿ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಮಸ್ತಕಾಭಿಷೇಕ ಕೇವಲ ಧಾರ್ಮಿಕ ಕಾರ್ಯಕ್ರಮ ಮಾತ್ರವಲ್ಲ ಇದೊಂದು ಅತ್ಯಮೋಘವಾದ ಕಾರ್ಕಳವಲ್ಲದೆ ನಾಡಿನ ಸಮಸ್ತ ಬಂದುಗಳು ಜಾತಿ ಮತ ಬೇದವಿಲ್ಲದೆ ನಡೆಸುವ ಮೂಲಕ ನಾವು ಮಾತ್ರ ಬೆಳೆಯುವುದಲ್ಲ, ಸಮಾಜ ಕೂಡ ಬೆಳೆಯಬೇಕು ಎಂದರು.
ಮಸ್ತಕಾಭಿಷೇಕಕ್ಕೆ ಇನ್ನು 305 ದಿನಗಳು ಬಾಕಿ ಇವೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕಿದೆ ಎಂದು ಆಶಯ ವ್ಯಕ್ತಪಡಿಸಿದರು. ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ ವತಿಯಿಂದ ದಾನಶಾಲೆ, ಬಾಹುಬಲಿ ಪ್ರವಚನ ಮಂದಿರದಲ್ಲಿ ರವಿವಾರ ಮಹಾಮಸ್ತಕಾಭಿಷೇಕ ಕಾರ್ಯಾಲಯದ ಉದ್ಘಾಟನೆ ಹಾಗೂ ದಿನಾಂಕ ಘೋಷಣೆ ಕಾರ್ಯಕ್ರಮ ನಡೆಯಿತು.
ಧರ್ಮಸ್ಥಳದ ಡಿ ಹರ್ಶೆಂದ್ರ ಕುಮಾರ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಜೀವಿತಾವಧಿಯಲ್ಲಿ ವೇಣೂರು, ಧರ್ಮಸ್ಥಳ ಹಾಗೂ ಕಾರ್ಕಳದ ಗೋಮಟೇಶ್ವರನ ಮಸ್ತಕಾಭಿಷೇಕವನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಗುತ್ತಿರುವುದು ನಮ್ಮ ಸೌಭಾಗ್ಯ, ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ ಎಂದರು.
ಕಾರ್ಕಳ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಮಹಾಮಸ್ತಕಾಭಿಷೇಕ ಧಾರ್ಮಿಕ ವಿಧಿ ವಿಧಾನದ ಜತೆಗೆ ಜಗತ್ತಿಗೆ ಒಳಿತಾಗಲಿ ಎನ್ನುವ ಮಹೋನ್ನತ ದೃಷ್ಟಿಕೋನದ ಮಹೋತ್ಸವ ಆಗಿದೆ. ಈ ಪವಿತ್ರ ಕಾರ್ಯದ ಹಿಂದೆ ಭಾರತೀಯ ಸಂಸ್ಕೃತಿ, ಶ್ರದ್ದೆ, ಭಕ್ತಿಯ ಶಕ್ತಿಯ ಸಂದೇಶವಿದೆ ಭಕ್ತರ ಮನಸ್ಸು ಸದಾ ಭಗವಂತನ ಸಾನ್ನಿಧ್ಯದಲ್ಲಿ ನೆಲೆಸಿರಬೇಕು. ಭಗವಾನ್ ಬಾಹುಬಲಿಯ ತ್ಯಾಗ ಮತ್ತು ವೈರಾಗ್ಯದ ಜೀವನ ನಮ್ಮ ಜೀವನಕ್ಕೆ ದಾರಿದೀಪವಾಗಲಿ ಎಂದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ, ಅಧಾನಿ ಗ್ರೂಫ್ ಕರ್ನಾಟಕ ಇದರ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಅಧ್ಯಕ್ಷ ಕಿಶೋರ್ ಅಳ್ವ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇದರ ಮ್ಯಾನೇಜಿಂಗ್ ಟ್ರಸ್ಟಿ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಮಾಜಿ ಸಚಿವ ಅಭಯಚಂದ್ರ ಜೈನ್ ಶುಭ ಹಾರೈಸಿ ಮಹಾಮಸ್ತಕಾಭಿಷೇಕದ ಯಶಸ್ಸಿಗೆ ಪೂರ್ಣ ಪ್ರಮಾಣದ ಸಹಕಾರದ ಭರವಸೆ ನೀಡಿದರು ಸಮಿತಿಯ ಉಪಾಧ್ಯಕ್ಷ ಕೆ.ಪಿ. ಜಗದೀಶ್ ಅಧಿಕಾರಿ ಕಾರ್ಕಳ ಡಿವೈಎಸ್‌ಪಿ ವಿಜಯ ಪ್ರಸಾದ್, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಮಸ್ತಕಾಭಿಷೇಕ ಸಮಿತಿ ಮುಖ್ಯಸ್ಥರುಗಳಾದ ಪ್ರಭಾತ್ ಕುಮಾರ್, ಅನಂತರಾಜ ಪೂವಣಿ, ಜಿ.ಪಂ. ಸಿಇಒ ಪ್ರತೀಕ್ ಬಯಾಲ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯ್ಕ್, ಸಂಪತ್ ಸಾಮ್ರಾಜ್ಯ, ಸುಧೀರ್ ಪಡಿವಾಳ್, ಕೆ. ಜಯಕೀರ್ತಿ ಕಡಂಬ, ಹೇಮಚಂದ್ರ ಜೈನ್, ಸುನಿಲ್ ಕುಮಾರ್ ಬಜಗೋಳಿ, ಮಹಾವೀರ ಹೆಗ್ಡೆ, ಭರತ್ ಕುಮಾರ್ ಜೈನ್, ಶೀತಲ್ ಜೈನ್, ಸುಭಾಶ್ಚಂದ್ರ ಚೌಟ, ಶಾಂತಿರಾಜ ಜೈನ್, ಮಹೇಂದ್ರ ವರ್ಮ ಜೈನ್, ಶಿಶುಪಾಲ ಜೈನ್ ಉಪಸ್ಥಿತರಿದ್ದರು.
ಪುಷ್ಪರಾಜ್ ಜೈನ್ ಮಂಗಳೂರು ಸ್ವಾಗತಿಸಿದರು. ಮೋಹನ್ ಪಡಿವಾಳ್ ವಂದಿಸಿ, ಅಜಿತ್ ಕೊಕ್ರಾಡಿ ನಿರೂಪಿಸಿದರು.