ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಉದ್ಘಾಟನೆ
ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಪ್ರಶಾಂತ್ ಕಾಜವ ಅವರು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ, ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್‌ನ ಪಾತ್ರ ಮಹತ್ತರವಾದುದು ಎಂದು ಹೇಳಿದರು.
ಮುಡಿಪು ಜನ ಶಿಕ್ಷಣ ಟ್ರಸ್ಟ್‌ನ ಸ್ವಚ್ಛತಾ ರಾಯಭಾರಿ ಶೀನಶೆಟ್ಟಿ ಹಾಗೂ ಕೃಷ್ಣಮೂಲ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಸವಿಂಗಡಣೆಯ ಕ್ರಮವನ್ನು ಹಾಗೂ ಅದರ ಸಮರ್ಪಕ ನಿರ್ವಹಣೆಯನ್ನು ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಯವರಾದ ಡಾ. ಶೇಷಪ್ಪ ಕೆ. ಅವರು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಸಾಮುದಾಯಿಕ ಬದುಕಿನ ಮೌಲ್ಯಗಳನ್ನು ತಿಳಿಸುತ್ತದೆಂದು ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಡಾ. ಸುರೇಖಾ ಅವರು ಶಿಬಿರಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲ ಸತೀಶ್ ಗಟ್ಟಿ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಹಶಿಬಿರಾಧಿಕಾರಿಯಾದ ಉಸ್ಮಾನ್ ಅವರು ಸ್ವಾಗತಿಸಿದರು. ಶಿಬಿರಾಧಿಕಾರಿಯಾದ ತನುಜ ಎಂ. ಅವರು ವಂದಿಸಿದರು. ಬಿಂದುಶ್ರೀ ಕಾರ್ಯಕ್ರಮ ನಿರೂಪಿಸಿದರು.