ಏ.10 ರಂದು ಶ್ರೀ ನವದುರ್ಗಾದೇವಿ: ಶಾಂತೇರಿ ಕಾಮಾಕ್ಷಿ ದೇಗುಲದ 25ನೇ ಪ್ರತಿಷ್ಠಾ ವರ್ಧಂತ್ಯುತ್ಸವ
Friday, April 3, 2026
ಕುಂದಾಪುರ: ಇಲ್ಲಿನ ಹೊಸ ಬಸ್ ನಿಲ್ದಾಣದ ಖಾರ್ವಿಕೇರಿ ರಸ್ತೆಯಲ್ಲಿರುವ ಶ್ರೀ ನವದುರ್ಗಾದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ 25ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವು ಏ.10.ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಜರುಗಲಿರುವುದು.
ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ, ಬ್ರಹ್ಮಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ, ಮಧ್ಯಾಹ್ನ 12.30ಕ್ಕೆ ವಿಶೇಷ ಹೂವಿನ ಅಲಂಕಾರ ಪೂಜಮಂಗಳಾರತಿ, ತೀರ್ಥ-ಪ್ರಸಾದ ವಿತರಣೆ ಬಳಿಕ "*ಸಾರ್ವಜನಿಕ ಮಹಾ ಅನ್ನಸಂತರ್ಪಣೆ"* ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.