ಏ.28 ರಂದು ಕುಂದಾಪುರ ಶ್ರೀ ಉರ್ಮಾರಿ ದೇವಳದ ವರ್ಧಂತ್ಯುತ್ಸವ

ಏ.28 ರಂದು ಕುಂದಾಪುರ ಶ್ರೀ ಉರ್ಮಾರಿ ದೇವಳದ ವರ್ಧಂತ್ಯುತ್ಸವ


ಕುಂದಾಪುರ: ಇಲ್ಲಿನ ಹೊಸ ಬಸ್ ನಿಲ್ದಾಣದ ಸಮೀಪದ ಖಾರ್ವಿ ಕೆಳಕೇರಿಯಲ್ಲಿರುವ ಶ್ರೀ ಉರ್ಮಾರಿ ದೇವಸ್ಥಾನದ 15ನೇ ವರ್ಷದ ವಾರ್ಷಿಕ ವರ್ಧಂತಿ ಮಹೋತ್ಸವವು ಏ.28 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿರುವುದು.

ಬೆಳಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಗಣಪತಿ ಪೂಜೆ, ಕಲಶ ಸ್ಥಾಪನೆ, ಕಲಾತತ್ವ ಹೋಮ, ಆಧಿವಾಸ ಹೋಮ, ಅಲಂಕಾರ ಪೂಜೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ,  ಮಂಗಳಾರತಿ, ತೀರ್ಥ-ಪ್ರಸಾದ ವಿತರಣೆ, ಬಳಿಕ ಸೇವಾಕರ್ತರಿಂದ ಸಾರ್ವಜನಿಕ ಮಹಾ "ಅನ್ನ ಸಂತರ್ಪಣೆ" ಕಾರ್ಯಕ್ರಮ ನಡೆಯಲಿದೆ.

ಸಂಜೆ 6.30 ರಿಂದ ಸ್ಥಳೀಯ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ಹಾಗೂ 8 ಗಂಟೆಗೆ ರಾತ್ರಿ ಪೂಜೆ, ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article