ಅಕ್ರಮ ಜೇಡಿಮಣ್ಣು ಸಾಗಾಟ: ಪ್ರಕರಣ ದಾಖಲು
Friday, April 3, 2026
ಕುಂದಾಪುರ: ತಾಲೂಕಿನ ಬೇಳೂರು ಗ್ರಾಮದ ಗುಳ್ಳಾಡಿ ಪ್ರದೇಶದಲ್ಲಿ ಜೇಡಿ(ಕೊಜೆ)ಮಣ್ಣಿನ ಅಕ್ರಮ ಗಣಿಗಾರಿಕೆ ಹಾಗೂ ಸಾಗಾಟದ ವಿರುದ್ಧ ಕೋಟ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಸರ್ಕಾರಕ್ಕೆ ರಾಜಧನ ಪಾವತಿಸದೆ ಅಕ್ರಮ ಲಾಭ ಪಡೆಯುವ ಉದ್ದೇಶದಿಂದ ಜೇಡಿಮಣ್ಣು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಘಟನೆ ಏಪ್ರಿಲ್ 2ರಂದು ಬೆಳಕಿಗೆ ಬಂದಿದೆ.
ರಾಜೀವ್ ಎಂಬುವವರ ಜಾಗದಲ್ಲಿ ಪರವಾನಿಗೆ ಇಲ್ಲದೆ ಜೇಡಿಮಣ್ಣನ್ನು ತೆಗೆಯಲಾಗುತ್ತಿದ್ದು, ಅದನ್ನು ಎರಡು ಟಿಪ್ಪರ್ ವಾಹನಗಳ ಮೂಲಕ ಸಾಗಿಸಲಾಗುತ್ತಿತ್ತು. ಈ ಸಂಬಂಧ ಆರೋಪಿತರಾದ ಟಿಪ್ಪರ್ ವಾಹನಗಳ ಚಾಲಕರಾದ ರಮೇಶ್ ಹಾಗೂ ಮಲ್ಲಿಕಾರ್ಜುನ ಎಂಬಿಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎರಡು ಟಿಪ್ಪರ್ ಲಾರಿಗಳು ಹಾಗೂ ಒಂದು ಹಟಾಚಿ ಯಂತ್ರವನ್ನು ಜಪ್ತಿ ಮಾಡಲಾಗಿದೆ.