ದೇವಾಲಯದ ಹುಂಡಿ ಕಳ್ಳರ ಬಂಧನ

ದೇವಾಲಯದ ಹುಂಡಿ ಕಳ್ಳರ ಬಂಧನ


ಕುಂದಾಪುರ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ ಕಾಣಿಕೆ ಹುಂಡಿ ಕಳವು ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತನಿಖೆ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಏಪ್ರಿಲ್ 20 ರ ಬೆಳಿಗ್ಗೆ 7:56 ಗಂಟೆ ಸುಮಾರಿಗೆ ಹೆಲ್ಮೆಟ್ ಧರಿಸಿದ್ದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದನು. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಪ್ರಕರಣ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಎಚ್.ಡಿ. ಕುಲಕರ್ಣಿ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರಾದ ಸಂತೋಷ್ ಎ. ಕಾಯ್ಕಿಣಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳಲಾಯಿತು. ಶಂಕರನಾರಾಯಣ ಠಾಣೆಯ ಸಬ್ ಇನ್ಸ್ಪೆಕ್ಟರ್ ಐ.ಆರ್. ಗಡ್ಡೇಕರ್, ಪಿ.ಎಸ್.ಐ. ಅಕ್ಷಯ ಕುಮಾರಿ ಎಸ್.ಎನ್. ಸೇರಿದಂತೆ ಪೊಲೀಸ್ ಸಿಬ್ಬಂದಿಗಳ ತಂಡ ಶ್ರಮಪಟ್ಟು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದೆ.

ಬಂಧಿತ ಆರೋಪಿಗಳನ್ನು ಸಂದೀಪ್ ಆಚಾರಿ (28), ಮಠದಮನೆ, ಎಳಬೇರು, ಕಮಲಶಿಲೆ ಗ್ರಾಮ ಹಾಗೂ ಮುತ್ತಪ್ಪ ಶರಣಪ್ಪ ವಾಲಿಕರ್ (40), ಬನಹಟ್ಟಿ ಗ್ರಾಮ, ಕುಷ್ಟಗಿ ಎಂದು ಗುರುತಿಸಲಾಗಿದೆ. ಇವರನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article