ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆ

ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆ

ಕುಂದಾಪುರ: ಒಂಬತ್ತನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ವರದಿಯಾಗಿದೆ.

ಇಲ್ಲಿನ ಬೋರ್ಡ್ ಹೈಸ್ಕೂಲ್‌ನ 9ನೇ ತರಗತಿಯ ವಿದ್ಯಾರ್ಥಿ ಕೌಶಿಕ್ ಬಾಯಿರಿ (15) ಎಂಬಾತನೆ ಹೀಗೆ ನೇಣಿಗೆ ಶರಣಾದವನು.

ಈತನಿಗೆ ಶಾಲೆಯ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿದ್ದು, ಇದುವರೆಗಿನ ಪರೀಕ್ಷೆಗಳಿಗೆ ಹಾಜರಾಗಿದ್ದ. ಎ.6 ಕ್ಕೆ ಪರೀಕ್ಷೆ ಕೊನೆಗೂಳ್ಳುತ್ತಿತ್ತು. ಈ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article