ಕೈಗಾರಿಕಾ ಪ್ರದೇಶ ಹೆದ್ದಾರಿ ಸಂಪರ್ಕ ರಸ್ತೆ: ಎನ್‌ಎಂಪಿಎ.ನಿಂದ ಕಾಮಗಾರಿ 11 ಕೋಟಿ ವೆಚ್ಚ

ಕೈಗಾರಿಕಾ ಪ್ರದೇಶ ಹೆದ್ದಾರಿ ಸಂಪರ್ಕ ರಸ್ತೆ: ಎನ್‌ಎಂಪಿಎ.ನಿಂದ ಕಾಮಗಾರಿ 11 ಕೋಟಿ ವೆಚ್ಚ


ಮಂಗಳೂರು: ಬೈಕಂಪಾಡಿ ಕೈಗಾರಿಕಾಪ್ರದೇಶಕ್ಕೆ ಸಂಪರ್ಕಿಸುವ ಹೆದ್ದಾರಿ ಬದಿಯ ರಸ್ತೆಯ ಕಾಂಕ್ರೀಟ್ ಕಾಮಗಾರಿ ಹಾಗೂ ಟ್ರಕ್ ಯಾರ್ಡ್ ಗುರುವಾರದಿಂದ ಆರಂಭವಾಗಲಿದ್ದು, 11 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣ ವಾಗಲಿದೆ. ಎನ್‌ಎಂಪಿಎ ಇದಕ್ಕೆ ಅನುದಾನ ನೀಡಲಿದೆ.


ಶಾಸಕ ಡಾ. ಭರತ್ ಶೆಟ್ಟಿ ಅವರು ಎನ್‌ಎಂಪಿಎಗೆ ಮನವಿ ಮಾಡಿದ ಮೇರೆಗೆ ಬಂದರು ಅನುದಾನ ಬಿಡುಗಡೆ ಮಾಡಿದೆ.


ಈ ಕುರಿತು ಸೋಮವಾರ ಶಾಸಕರ ನೇತೃತ್ವದಲ್ಲಿ ಸಭೆ ನಡೆಯಿತು.


ಕೆಐಎಡಿಬಿ ಇಲಾಖೆ, ಟ್ರಾಫಿಕ್ ಪೊಲೀಸ್ ಹಾಗೂ ಬಂದರು ಪ್ರಾಧಿಕಾರದ ಅಧಿಕಾರಿಗಳ ಮಹತ್ವದ ಸಭೆ ನಡೆದು ಸಭೆಯಲ್ಲಿ ಕಾಮಗಾರಿ ಅವಧಿ, ಸಂಚಾರ ನಿಯಂತ್ರಣ ಹಾಗೂ ಸಾರ್ವಜನಿಕರಿಗೆ ಸನಸ್ಯೆ ಆಗದಂತೆ ಕಾಮಗಾರಿ ಚರ್ಚೆ ನಡೆಸಲಾಯಿತು.

ಕಾಮಗಾರಿ ಸುಗಮವಾಗಿ ನಡೆಯುವ ಉದ್ದೇಶದಿಂದ ಸಂಬಂಧಿತ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲು ಪೊಲೀಸರು ಆದೇಶ ಹೊರಡಿಸಲಿದ್ದು ಗುರುವಾರದಿಂದ ಪರ್ಯಾಯ ಸಂಚಾರ ಅವಕಾಶ ಮಾಡಿ ಕೊಡಲಾಗುವುದು.

ವಿಶೇಷವಾಗಿ ಭಾರೀ ವಾಹನಗಳ ಓಡಾಟ ಹೆಚ್ಚಿರುವ ಈ ಪ್ರದೇಶದಲ್ಲಿ ಸಂಚಾರ ನಿಯಂತ್ರಣ ಕ್ರಮಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ.ಬೈಕಂಪಾಡಿ ಕೈಗಾರಿಕಾ ಪ್ರದೇಶವು ಪ್ರಮುಖ ಉದ್ಯಮ ವಲಯವಾಗಿರುವುದರಿಂದ, ದೀರ್ಘಕಾಲದಿಂದ ರಸ್ತೆ ದುರಸ್ಥಿ ಹಾಗೂ ಕಾಂಕ್ರೀಟ್ ನಿರ್ಮಾಣದ ಬೇಡಿಕೆ ಕೇಳಿಬರುತ್ತಿತ್ತು. ಈಗ ಕಾಮಗಾರಿ ಆರಂಭವಾಗುತ್ತಿರುವುದರಿಂದ ಸ್ಥಳೀಯ ಉದ್ಯಮಿಗಳು, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಇನ್ನು ಎರಡು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಿತ ಅಧಿಕಾರಿಗಳಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಬಂದರು ಪ್ರಾಧಿಕಾರ, ಟ್ರಾಫಿಕ್, ಕೆಐಎಡಿಬಿ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article