ಬ್ರಹ್ಮರಕೂಟ್ಟು ಟೋಲ್‌ಗೇಟ್ ಬಂದ್: ಏಪ್ರಿಲ್ 28ಕ್ಕೆ ಬೃಹತ್ ಜನಾಂದೋಲನ ನಡಿಗೆ
ಗುರುಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿ.ಸಿ. ರೋಡ್ ನಾರಾಯಣಗುರು ವೃತ್ತದಿಂದ ಬ್ರಹ್ಮರಕೂಟ್ಲು ಟೋಲ್ ಗೇಟ್ ವರೆಗೆ ಜನಾಂದೋಲನ ನಡಿಗೆ ನಡೆಯಲಿದ್ದು, ಈ ಹೋರಾಟದಲ್ಲಿ ಎಲ್ಲರೂ ಕೈ ಜೋಡಿಸಬೇಕು’ ಎಂದು ಮನವಿ ಮಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಎಚ್ಚೆತ್ತು ಈ ಟೋಲ್ ಸಂಗ್ರಹಕ್ಕೆ ಸಂಬಂಧಪಟ್ಟಂತೆ ನಿಯಮಾವಳಿ ಉಲ್ಲಂಘನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನು ಬಾಹಿರವಾಗಿ ಸುಂಕ ವಸೂಲಾತಿ ಶಾಶ್ವತ ಮುಚ್ಚುವತನಕ ಹೋರಾಟ ಮುಂದುವರಿಯಲಿದೆ ಎಂದು ಅವರು ಎಚ್ಚರಿಸಿದರು.
ಗುರುಪುರ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಎಲ್.ಪಿ. ಪದ್ಮನಾಭ ಕೋಟ್ಯಾನ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಕೆಪಿಸಿಸಿ ಸದಸ್ಯ ಆರ್.ಕೆ.ಪೃಥ್ವಿರಾಜ್, ಬುಡಾ ಅಧ್ಯಕ್ಷ ಬೇಬಿ ಕುಂದರ್, ಕೃಷ್ಣ ಅಮೀನ್, ಭಾಷ ಗುರುಪುರ, ಮೊಹಮ್ಮದ್ ಉಂಙ, ಅಬ್ದುಲ್ ಮಜೀದ್ ಸೂರಲ್ಪಾಡಿ, ಗಣೇಶ್ ಪೂಜಾರಿ, ಮಾಲತಿ ಗಂಜೀಮಠ, ಯಶವಂತ ಶೆಟ್ಟಿ, ಸುನೀಲ್ ಪೂಜಾರಿ, ಜಯಂತಿ ವಾಮಂಜೂರು, ಭಾಷ ಮಾಸ್ಟರ್, ಚಂದ್ರಹಾಸ ಶೆಟ್ಟಿ, ದಯಾನಂದ ಶೆಟ್ಟಿ, ಶರೀಫ್ ಕನ್ನಿಬೆಟ್ಟು, ರೊನಾಲ್ಡ್ ಅಡ್ಯಾರ್, ಕೀರ್ತಿರಾಜ್, ಶ್ರೀಧರ್, ಮೋಹನ್ ಕರ್ಕೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.