ಎಸ್‌ಎಸ್‌ಎಲ್‌ಸಿ ಫಲಿತಾಂಶ: 826 ತುಳು ಭಾಷಾ ವಿದ್ಯಾರ್ಥಿಗಳು ತೇರ್ಗಡೆ
Thursday, April 23, 2026
ಮಂಗಳೂರು: ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 826 ವಿದ್ಯಾರ್ಥಿಗಳು ತುಳು ಭಾಷಾ ವಿಷಯದಲ್ಲಿ ತೇರ್ಗಡೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿಯ ಪ್ರೌಢಶಾಲೆಯಲ್ಲಿ ತೃತೀಯ ಭಾಷೆಯಾಗಿ ತುಳು ಭಾಷೆಯನ್ನು ಆಯ್ದಕೊಂಡು 826 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 826 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ತುಳು ಪಠ್ಯವನ್ನು ಆಯ್ದುಕೊಂಡ ವಿದ್ಯಾರ್ಥಿಗಳಿಗೆ ಹಾಗೂ ತುಳು ಭಾಷಾ ಶಿಕ್ಷಕರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.